ರವಿ ಗಣಿಗ
ಬೆಂಗಳೂರು: ಚೀನಾದಲ್ಲಿ ಕೋವಿಡ್ ಅಥವಾ ಅದೇ ಮಾದರಿಯ ವೈರಸ್ ಮತ್ತೆ ಕಾಣಿಸಿಕೊಂಡಿದೆ. ಅಲ್ಲಿ ಶೇ 80 ರಷ್ಟು ಜನ ಮಾಸ್ಕ್ ಹಾಕಿಕೊಂಡು ಓಡಾಡುತ್ತಿದ್ದಾರೆ ಎಂದು ಮಂಡ್ಯ ಶಾಸಕ ರವಿ ಗಣಿಗ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾನು ನಾಲ್ಕು ದಿನಗಳ ಪ್ರವಾಸ ಹೋಗಿದ್ದೆ. ಅಲ್ಲಿ ಮಾಸ್ಕ್ ಹಾಕಿಕೊಂಡು ಓಡಾಡುವ ದೃಶ್ಯ ಸಾಮಾನ್ಯವಾಗಿತ್ತು ಎಂದು ತಿಳಿಸಿದರು.
ಮಕ್ಕಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷೆ ಮಾಡುತ್ತಿದ್ದಾರೆ. ಯಾವುದೋ ವೈರಸ್ ಹರಡಿರಬಹುದು. ಆದ್ದರಿಂದ ಮುಂಜಾಗ್ರತೆ ಕ್ರಮವಾಗಿ ಮಾಸ್ಕ್ ಹಾಕಿಕೊಂಡಿರಬಹುದು. ಹಾಂಕಾಂಗ್ ವಿಮಾನ ನಿಲ್ದಾಣದಲ್ಲೂ ಮಾಸ್ಕ್ ಧರಿಸಿದ್ದರು. ಸಾರ್ವಜನಿಕ ಸ್ಥಳಗಳಲ್ಲಿ ಸ್ಯಾನಿಟೈಸರ್ ಇಡಲಾಗಿದೆ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.