ADVERTISEMENT

ಓಮೈಕ್ರಾನ್ | ಚಿಕಿತ್ಸೆಗೆ ವಿಶೇಷ ಐಸಿಯು: ಸುಧಾಕರ್

ವೈದ್ಯಕೀಯ ಕಾಲೇಜುಗಳ ನಿರ್ದೇಶಕರೊಂದಿಗೆ ಸಚಿವ ಡಾ.ಕೆ. ಸುಧಾಕರ್ ಸಭೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2021, 16:33 IST
Last Updated 3 ಡಿಸೆಂಬರ್ 2021, 16:33 IST
ಡಾ.ಕೆ. ಸುಧಾಕರ್
ಡಾ.ಕೆ. ಸುಧಾಕರ್   

ಬೆಂಗಳೂರು: ‘ಕೋವಿಡ್ ತಾಂತ್ರಿಕ ಸಲಹಾ ಸಮಿತಿಯಶಿಫಾರಸಿನ ಅನುಸಾರ ಓಮೈಕ್ರಾನ್ ಸೋಂಕಿತರಿಗೆ ವಿಶೇಷ ತೀವ್ರ ನಿಗಾ ಘಟಕ (ಐಸಿಯು) ಹಾಗೂ ವಾರ್ಡ್ ಕಲ್ಪಿಸಲಾಗುವುದು’ ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

ನಗರದಲ್ಲಿ ಕೊರೊನಾ ವೈರಾಣುವಿನಓಮೈಕ್ರಾನ್ ತಳಿ ಪ್ರಕರಣಗಳು ಪತ್ತೆಯಾಗಿರುವುದರಿಂದ ವೈದ್ಯಕೀಯ ಕಾಲೇಜುಗಳ ನಿರ್ದೇಶಕರ ಜೊತೆಗೆ ಶುಕ್ರವಾರ ಸಭೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ‘ಡೆಲ್ಟಾ ತಳಿಯ ಸೋಂಕಿತರನ್ನು ಪ್ರತ್ಯೇಕ ವಾರ್ಡ್‌ನಲ್ಲಿ ‌ಇರಿಸಿ, ಚಿಕಿತ್ಸೆ ನೀಡಲಾಗುತ್ತದೆ. ಓಮೈಕ್ರಾನ್ ತಳಿಯ ಸೋಂಕಿತರ ಚಿಕಿತ್ಸೆಗೆ ಮೀಸಲಿಡಬೇಕಾದ ವಿವಿಧ ಮಾದರಿಯ ಹಾಸಿಗೆಗಳ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು’ ಎಂದು ಹೇಳಿದರು.

‘ಸಚಿವ ಸಂಪುಟದ ನಿರ್ಧಾರದಂತೆ ಮಕ್ಕಳ ಐಸಿಯುಗಳ ಸಿದ್ಧತೆಗೆ ಸೂಚಿಸಲಾಗಿದೆ. ಗೃಹ ವೈದ್ಯರ ಕೋವಿಡ್ ಅಪಾಯಭತ್ಯೆ ಬಾಕಿ ಇದ್ದು, ಹಣಕಾಸು ಇಲಾಖೆಯಿಂದ ₹ 55 ಕೋಟಿ ಬಿಡುಗಡೆ ಮಾಡಿಸಲಾಗಿದೆ. ತಾಂತ್ರಿಕ ಸಮಸ್ಯೆಯಿಂದ ವೇತನ ಬ್ಯಾಂಕ್‌ ಖಾತೆಗಳಿಗೆ ಜಮಾ ಆಗಿರಲಿಲ್ಲ. ಈ ತಿಂಗಳಿನಿಂದ ಸಮಸ್ಯೆ ಆಗುವುದಿಲ್ಲ’ ಎಂದು ಭರವಸೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.