ADVERTISEMENT

ಬಿಬಿಎಂಪಿ ಪಶ್ಚಿಮ ವಲಯ: ಕೋವಿಡ್ ಟೆಸ್ಟ್ ಸಾವಿರಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 16 ಜುಲೈ 2020, 7:06 IST
Last Updated 16 ಜುಲೈ 2020, 7:06 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಬಿಬಿಎಂಪಿ ಪಶ್ಚಿಮ ವಲಯದಲ್ಲಿ‌ ಕೋವಿಡ್ ಶಂಕಿತರ ಮಾದರಿಗಳ ಪರೀಕ್ಷೆ ಸದ್ಯ ದಿನಕ್ಕೆ 250 ಆಗುತ್ತಿದ್ದು ಅದನ್ನು 1,000ಕ್ಕೆ ಹೆಚ್ಚಿಸಲು ತೀರ್ಮಾನಿಸಲಾಯಿತು.

ಪಶ್ಚಿಮ ವಲಯದ ಕೋವಿಡ್ ಉಸ್ತುವಾರಿಯೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ಇರೊಫಿನ್ಸ್ ಕ್ಲಿನಿಕಲ್ ಜೆನೆಟಿಕ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಸುಧಾನಷು ಶ್ರೀವಾಸ್ತವ ಅವರ ಜತೆ ಗುರುವಾರ ಮಾತುಕತೆ ನಡೆಸಿದ ನಂತರ ಈ ವಿಷಯ ತಿಳಿಸಿದರು.

ಇರೊಫಿನ್ಸ್ ಸಂಸ್ಥೆ, ಮಾದರಿಗಳ ಪರೀಕ್ಷೆ ಸಾಮರ್ಥ್ಯವನ್ನು 250ರಿಂದ1000ಕ್ಕೆ ಹೆಚ್ಚಿಸಿಕೊಂಡಿದ್ದು, ನಾಳೆಯಿಂದಲೇ ಈ ಕೆಲಸ ಮಾಡಲಿದೆ ಎಂದು ಹೇಳಿದರು.

ADVERTISEMENT

ಪಶ್ಚಿಮ ವಲಯದಲ್ಲಿ ಆರು ವಿಧಾನಸಭಾ ಕ್ಷೇತ್ರಗಳು ಇದ್ದು ತಲಾ 150 ಮಾದರಿಗಳನ್ನು ಹೆಚ್ಚುವರಿಯಾಗಿ ಪರೀಕ್ಷೆ ಮಾಡಲಾಗುವುದು. ಇದು ತ್ವರಿತವಾಗಿ ಚಿಕಿತ್ಸೆ ನೀಡಲು ಅನುಕೂಲ ಆಗುತ್ತದೆ ಎಂದರು.

ಬಿಬಿಎಂಪಿ ಪಶ್ಚಿಮ ವಲಯ ಜಂಟಿ‌ ಆಯುಕ್ತ ಚಿದಾನಂದ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಈ ಸಭೆಯಲ್ಲಿ ‌ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.