ADVERTISEMENT

ಕೋವಿಡ್: ಪರೀಕ್ಷೆ ಗಣನೀಯ ಇಳಿಕೆ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2021, 21:11 IST
Last Updated 15 ಫೆಬ್ರುವರಿ 2021, 21:11 IST
   

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 42,245 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಇವು ಈ ವರ್ಷದಲ್ಲಿ 24 ಗಂಟೆಗಳ ಅವಧಿಯಲ್ಲಿ ನಡೆಸಲಾದ ಅತಿ ಕಡಿಮೆ ಪರೀಕ್ಷೆಗಳಾಗಿವೆ.

ರಾಜ್ಯದಲ್ಲಿ ಹೊಸದಾಗಿ 368 ಕೋವಿಡ್‌ ಪ್ರಕರಣಗಳುಸೋಮವಾರ ದೃಢಪಟ್ಟಿವೆ. ಈವರೆಗೆ ಕೋವಿಡ್ ಪೀಡಿತರಾದವರ ಸಂಖ್ಯೆ 9.45 ಲಕ್ಷ ದಾಟಿದೆ. ಸೋಂಕಿತರಲ್ಲಿ ಬೆಂಗಳೂರಿನಲ್ಲಿ ಇಬ್ಬರು ಮಾತ್ರ ಮೃತಪಟ್ಟಿರುವುದು ದೃಢಪಟ್ಟಿದೆ. ಈವರೆಗೆ ಸಾವಿಗೀಡಾದವರ ಸಂಖ್ಯೆ 12,267ಕ್ಕೆ ತಲುಪಿದೆ.

ಸೋಮವಾರ 84 ಮಂದಿ ಸೇರಿದಂತೆ ಕಳೆದ ನ.25ರಿಂದ ಬ್ರಿಟನ್‌ನಿಂದ ರಾಜ್ಯಕ್ಕೆ 10,866 ಮಂದಿ ಬಂದಿದ್ದಾರೆ. ಅವರಲ್ಲಿ ಈವರೆಗೆ 25 ಮಂದಿಯಲ್ಲಿ ರೂಪಾಂತರ ವೈರಾಣು ಕಾಣಿಸಿಕೊಂಡಿದೆ.

ADVERTISEMENT

ಕೋವಿಡ್ ಪೀಡಿತರಲ್ಲಿ ಮತ್ತೆ 430 ಮಂದಿ ಗುಣಮುಖರಾಗಿದ್ದಾರೆ. ಇದರಿಂದಾಗಿ ಕಾಯಿಲೆಯಿಂದ ಚೇತರಿಸಿಕೊಂಡವರ ಸಂಖ್ಯೆ 9.27 ಲಕ್ಷ ದಾಟಿದೆ. 5,772 ಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರಲ್ಲಿ 128 ಮಂದಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದಾರೆ.

ಬೆಂಗಳೂರಿನಲ್ಲಿ 196 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 4.02 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 10 ಪ್ರಕರಣಗಳು ವರದಿಯಾಗಿದೆ. ಅಲ್ಲಿ ಸೋಂಕಿತರ ಸಂಖ್ಯೆ 53,793ಕ್ಕೆ ಏರಿಕೆಯಾಗಿದೆ. ತುಮಕೂರು 25, ಶಿವಮೊಗ್ಗ 20, ಮಂಡ್ಯ 19, ಉಡುಪಿ 11, ದಕ್ಷಿಣ ಕನ್ನಡದಲ್ಲಿ 9 ಪ್ರಕರಣಗಳು ಹೊಸದಾಗಿ ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.