ADVERTISEMENT

ಕೋವಿಡ್: ಖಾಸಗಿ ಆಸ್ಪತ್ರೆಗಳಿಗೆ ₹779 ಕೋಟಿ

​ಪ್ರಜಾವಾಣಿ ವಾರ್ತೆ
Published 30 ಜೂನ್ 2022, 0:53 IST
Last Updated 30 ಜೂನ್ 2022, 0:53 IST
   

ಬೆಂಗಳೂರು: ಆಯುಷ್ಮಾನ್ ಭಾರತ–ಆರೋಗ್ಯ ಕರ್ನಾಟಕ ಯೋಜನೆಯಡಿ ಖಾಸಗಿ ಆಸ್ಪತ್ರೆಗಳು ಈವರೆಗೆ 2.39 ಲಕ್ಷ ಕೋವಿಡ್ ಪೀಡಿತರಿಗೆ ಚಿಕಿತ್ಸೆ ಒದಗಿಸಿವೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಚಿಕಿತ್ಸೆ ನೀಡಿದ ಆಸ್ಪತ್ರೆಗಳಿಗೆ₹ 779.83 ಕೋಟಿ ಪಾವತಿಸಲಾಗಿದೆ.

ಕೋವಿಡ್ ಮೊದಲ ಅಲೆಯಲ್ಲಿ (2020ರ ಮಾರ್ಚ್‌ನಿಂದ 2021ರ ಮಾರ್ಚ್‌ವರೆಗೆ) ಯೋಜನೆಯಡಿ ಖಾಸಗಿ ಆಸ್ಪತ್ರೆಗಳಲ್ಲಿ 1,17,930 ಕೋವಿಡ್ ಪೀಡಿತರಿಗೆ ಚಿಕಿತ್ಸೆ ನೀಡಲಾಗಿದೆ. ಟ್ರಸ್ಟ್ ಮೂಲಕ ₹391.26 ಕೋಟಿ ಚಿಕಿತ್ಸಾ ವೆಚ್ಚ ಭರಿಸಲಾಗಿತ್ತು. ಎರಡನೇ ಅಲೆಯಲ್ಲಿ (2021ರ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ) 1,14,690 ಮಂದಿಗೆ ಚಿಕಿತ್ಸೆ ಒದಗಿಸಲಾಗಿದ್ದು, ₹376.76 ಕೋಟಿ ಪಾವತಿಸಲಾಗಿದೆ.

ಈ ವರ್ಷದ ಏಪ್ರಿಲ್‌ ಬಳಿಕ 65ಕೋವಿಡ್ ಪೀಡಿತರಿಗೆ ಚಿಕಿತ್ಸೆ ಒದಗಿಸಲಾಗಿದೆ. ಚಿಕಿತ್ಸಾ ವೆಚ್ಚ ₹ 2.83 ಕೋಟಿ ಪಾವತಿಸಲಾಗಿದೆ.‘ಸಾಂಕ್ರಾಮಿಕ ರೋಗ ಕಾಣಿಸಿಕೊಂಡ ಈ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ ತ್ವರಿತ ಹಾಗೂ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿತ್ತು. ಹೀಗಾಗಿ, ಖಾಸಗಿ ವ್ಯವಸ್ಥೆಯಡಿಯೂ ಹೆಚ್ಚಿನವರಿಗೆ ವೈದ್ಯಕೀಯ ಸೌಲಭ್ಯ ಒದಗಿಸಲಾಗಿದೆ. ಇದು ನಮ್ಮ ಬದ್ಧತೆಗೆ ಸಾಕ್ಷಿ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.