ADVERTISEMENT

ಕೊರೊನಾ ಲಸಿಕೆ: ಆತಂಕ ಬೇಡ: ಸಚಿವ ಬೈರತಿ ಬಸವರಾಜ್

​ಪ್ರಜಾವಾಣಿ ವಾರ್ತೆ
Published 16 ಜನವರಿ 2021, 20:12 IST
Last Updated 16 ಜನವರಿ 2021, 20:12 IST
ಕೆ.ಆರ್.ಪುರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಡಾ.ಅಶೋಕ್ ಮೊದಲ ಲಸಿಕೆ ಪಡೆದರು. ಸಚಿವರಾದ ಬೈರತಿ ಬಸವರಾಜ್, ಎಸ್.ಟಿ.ಸೋಮಶೇಖರ್ ಇದ್ದರು
ಕೆ.ಆರ್.ಪುರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಡಾ.ಅಶೋಕ್ ಮೊದಲ ಲಸಿಕೆ ಪಡೆದರು. ಸಚಿವರಾದ ಬೈರತಿ ಬಸವರಾಜ್, ಎಸ್.ಟಿ.ಸೋಮಶೇಖರ್ ಇದ್ದರು   

ಕೆ.ಆರ್.ಪುರ: ‘ಕೋವಿಡ್ ನಿಯಂತ್ರಿಸಲು ಲಸಿಕೆ ಕಂಡುಹಿಡಿಯಲಾಗಿದೆ. ಲಸಿಕೆ ಪಡೆದುಕೊಂಡವರು ಆತಂಕ ಪಡುವ ಅಗತ್ಯವಿಲ್ಲ. ಯಾವುದೇ ಅಡ್ಡ ಪರಿಣಾಮವಾಗದು’ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೇಳಿದರು.

ಕೆ.ಆರ್.ಪುರದ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಲಸಿಕೆ ವಿತರಿಸಿ ಮಾತನಾಡಿದ ಅವರು, ‘ಕೊರೊನಾ ಸೇನಾನಿಗಳಿಗೆ ಆದ್ಯತೆ ಮೇರೆಗೆ ಲಸಿಕೆ ವಿತರಿಸಲಾಗುವುದು’ ಎಂದರು.

ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ‘ವಿಜ್ಞಾನಿಗಳು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕ ಪರವಾಗಿ ಧನ್ಯವಾದಗಳು ಅರ್ಪಿಸುತ್ತೇವೆ. ಮೋದಿಯವರ ಸತತ ಪ್ರಯತ್ನದ ನಂತರ ಭಾರತಕ್ಕೆ ಲಸಿಕೆ ಲಭಿಸಿದೆ’ ಎಂದರು.

ADVERTISEMENT

ತಾಲ್ಲೂಕು ಆಸ್ಪತ್ರೆ ವತಿಯಿಂದ ಪ್ರಥಮ ಲಸಿಕೆ ಪಡೆದ ಡಾ.ಅಶೋಕ್ ಮಾತನಾಡಿ, ‘ನಾನು ಲಸಿಕೆ ಪಡೆದು ಆರೋಗ್ಯವಾಗಿದ್ದೇನೆ. ಯಾವುದೇ ಸಮಸ್ಯೆಯಾಗಿಲ್ಲ. ನಮ್ಮ ಸಿಬ್ಬಂದಿಗೆ ಧೈರ್ಯ ಬರಲು ಮೊದಲಿಗನಾಗಿ ಲಸಿಕೆ ಪಡೆದಿದ್ದು ಖುಷಿ ಆಗಿದೆ’ ಎಂದರು.

ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕ ಭಾನುಪ್ರಕಾಶ, ಡಾ.ರಜನಿ, ಡಾ.ಮದನಿ, ಡಿ.ಎಲ್.ಒ ನದೀಮ್ ಅಹಮದ್, ಶ್ರೀನಿವಾಸ್, ತಾಲ್ಲೂಕು ವೈದ್ಯ ಅಧಿಕಾರಿ ಚಂದ್ರಶೇಖರ್, ಪಿ.ಜೆ.ಅಂತೋನಿಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.