ADVERTISEMENT

‘ಬೊಮ್ಮನಹಳ್ಳಿ ವಲಯ ನಗರಕ್ಕೆ ಮಾದರಿ’

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2020, 21:42 IST
Last Updated 19 ಆಗಸ್ಟ್ 2020, 21:42 IST
ಬೊಮ್ಮನಹಳ್ಳಿ ವಲಯ ಕೋವಿಡ್ ವಾರ್ ರೂಂ ಗೆ ಭೇಟಿ ನೀಡಿದ ಟಿ.ಎಂ.ವಿಜಯಭಾಸ್ಕರ್ ಅಧಿಕಾರಿಗಳಿಂದ ಮಾಹಿತಿ ಪಡೆದರು. ವಲಯದ ಕೋವಿಡ್ ಉಸ್ತುವಾರಿ ಮಣಿವಣ್ಣನ್, ಆರೋಗ್ಯಾಧಿಕಾರಿ ಡಾ.ಸುರೇಶ್, ಜಂಟಿ ಆಯುಕ್ತ ಎಂ.ರಾಮಕೃಷ್ಣ ಇದ್ದಾರೆ
ಬೊಮ್ಮನಹಳ್ಳಿ ವಲಯ ಕೋವಿಡ್ ವಾರ್ ರೂಂ ಗೆ ಭೇಟಿ ನೀಡಿದ ಟಿ.ಎಂ.ವಿಜಯಭಾಸ್ಕರ್ ಅಧಿಕಾರಿಗಳಿಂದ ಮಾಹಿತಿ ಪಡೆದರು. ವಲಯದ ಕೋವಿಡ್ ಉಸ್ತುವಾರಿ ಮಣಿವಣ್ಣನ್, ಆರೋಗ್ಯಾಧಿಕಾರಿ ಡಾ.ಸುರೇಶ್, ಜಂಟಿ ಆಯುಕ್ತ ಎಂ.ರಾಮಕೃಷ್ಣ ಇದ್ದಾರೆ   

ಬೊಮ್ಮನಹಳ್ಳಿ: ಬೊಮ್ಮನಹಳ್ಳಿ ವಲಯದಎಚ್ಎಸ್ಆರ್ ಬಡಾವಣೆಯಲ್ಲಿರುವ ಕೋವಿಡ್ ವಾರ್ ರೂಂ ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.

ಆಂಬುಲೆನ್ಸ್, ಆಸ್ಪತ್ರೆಗಳಲ್ಲಿ ಹಾಸಿಗೆ ವ್ಯವಸ್ಥೆ, ತುರ್ತು ಕರೆ ವ್ಯವಸ್ಥೆಯನ್ನು ಖುದ್ದು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.ಜತೆಗೆ ಆಂಬುಲೆನ್ಸ್, ಭದ್ರತಾ ಸಿಬ್ಬಂದಿಯ ಯೋಗಕ್ಷೇಮ ವಿಚಾರಿಸಿದರು.

‘ಬೊಮ್ಮನಹಳ್ಳಿ ವಲಯದಲ್ಲಿ ಕೋವಿಡ್ ಕಾರ್ಯಾಚರಣೆ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿರುವುದು, ಇಡೀ ನಗರಕ್ಕೆ ಮಾದರಿಯಂತಿದೆ’ ಎಂದು ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿದರು.

ADVERTISEMENT

ಬೊಮ್ಮನಹಳ್ಳಿ ವಲಯ ಕೋವಿಡ್ ಉಸ್ತುವಾರಿ ಕ್ಯಾಪ್ಟನ್ ಮಣಿವಣ್ಣನ್, ವಲಯದಲ್ಲಿ ಕೈಗೊಂಡ ಕೋವಿಡ್ ಕಾರ್ಯಾಚರಣೆಯ ಮಾಹಿತಿಯನ್ನು ಮುಖ್ಯ ಕಾರ್ಯದರ್ಶಿಗಳಿಗೆ ನೀಡಿ ದರು. ಶಾಸಕ ಸತೀಶ್ ರೆಡ್ಡಿ, ಬಿಬಿಎಂಪಿ ಬೊಮ್ಮನಹಳ್ಳಿ ವಲಯ ಜಂಟಿ ಆಯುಕ್ತ ಎಂ.ರಾಮಕೃಷ್ಣ, ಆರೋಗ್ಯಾಧಿಕಾರಿ ಡಾ.ಸುರೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.