ದೇವನಹಳ್ಳಿ: ವಿದೇಶದಿಂದ ಭಾನುವಾರ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರ ಪೈಕಿ ಏಳು ಪ್ರಯಾಣಿಕರಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಇಂಗ್ಲೆಂಡ್‌ನಿಂದ ಬಂದಿರುವ ಮೂವರು, ಅಮೆರಿಕಾದ ಇಬ್ಬರು, ಐರ್ಲೆಂಡ್ ಹಾಗೂ ಟಾಂಜಾನಿಯಾ ಮೂಲದ ಓರ್ವ ವ್ಯಕ್ತಿಯಲ್ಲಿ ಸೊಂಕು ಪತ್ತೆಯಾಗಿದೆ.
ರಾಜ್ಯದಲ್ಲಿ ಶನಿವಾರ 8,906 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕು ದೃಢ ಪ್ರಮಾಣ ಶೇ 5.42ಕ್ಕೆ ಏರಿಕೆಯಾಗಿದೆ.
ಈ ಪ್ರಮಾಣ ಶೇ 5ರ ಗಡಿ ದಾಟಿದಲ್ಲಿ ಸೋಂಕು ಹರಡುವಿಕೆ ತಡೆಗೆ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳುವಂತೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಈ ತಿಂಗಳು 8 ದಿನಗಳಲ್ಲಿ 32,621 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 38,507ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, 7,113 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಬೆಂಗಳೂರಿನಲ್ಲಿ ಕೋವಿಡ್ ದೃಢ ಪ್ರಮಾಣ ಶೇ 10 ರಷ್ಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.