ADVERTISEMENT

ವಿಕ್ಟೋರಿಯಾ ಆಸ್ಪತ್ರೆಯ ಕೋವಿಡ್ ಚಿಕಿತ್ಸೆಗೆ ಮೆಚ್ಚುಗೆ

ಸಚಿವರಿಗೆ ಪತ್ರ ಬರೆದ ಸೋಂಕಿತ ವ್ಯಕ್ತಿ

​ಪ್ರಜಾವಾಣಿ ವಾರ್ತೆ
Published 11 ಜುಲೈ 2020, 15:48 IST
Last Updated 11 ಜುಲೈ 2020, 15:48 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕೊರೊನಾ ಸೋಂಕಿನಿಂದ ಚೇತರಿಸಿಕೊಂಡ ನಗರದ ವ್ಯಕ್ತಿಯೊಬ್ಬರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದೊರೆತ ಚಿಕಿತ್ಸೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರಿಗೆ ಪತ್ರ ಬರೆದಿದ್ದಾರೆ. ‌

‘ನನಗೆ ಹಾಗೂ ಕುಟುಂಬದ ಸದಸ್ಯರಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಜೂ.23ರಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾದೆವು. ಮೊದಲ ಎರಡು ದಿನಗಳು ಸಾಮಾನ್ಯ ವಾರ್ಡ್‌ನಲ್ಲಿ ಇದ್ದೆವು. ವೈದ್ಯರು ಹಾಗೂ ಶುಶ್ರೂಷಕರು ರೋಗಿಗಳ ಆರೋಗ್ಯವನ್ನು ನಿತ್ಯ ವಿಚಾರಿಸಿ, ಅಗತ್ಯ ಆರೈಕೆ ಮಾಡುತ್ತಿದ್ದರು. ಬೆಳಿಗ್ಗೆ ಉಪಾಹಾರ, ಮಧ್ಯಾಹ್ನ ಊಟ ಎಲ್ಲವೂ ಸಮಯಕ್ಕೆ ಸರಿಯಾಗಿ ಪೂರೈಕೆಯಾಗುತ್ತಿತ್ತು. ನಾನಿದ್ದ ವಾರ್ಡ್‌ನಲ್ಲಿನ ಇತರ ರೋಗಿಗಳೂ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

‘ಎರಡು ದಿನಗಳ ಬಳಿಕ ನಾವು ವಿಶೇಷ ವಾರ್ಡ್‌ಗೆ ಹೋದೆವು. ಅಲ್ಲೂ ಮನೆಗಿಂತಲೂ ಉತ್ತಮವಾದ ಆಹಾರ ನೀಡಲಾಗುತ್ತಿತ್ತು. ‌ಆಸ್ಪತ್ರೆಯ ವೈದ್ಯರು, ಶುಶ್ರೂಷಕರು, ಆರೋಗ್ಯ ಸಿಬ್ಬಂದಿ, ಸ್ವಚ್ಛತಾ ಸಿಬ್ಬಂದಿಗೆ ಧನ್ಯವಾದಗಳು’ ಎಂದು ಪತ್ರದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ADVERTISEMENT

ಪತ್ರದ ಪ್ರತಿಯನ್ನು ಸುಧಾಕರ್ ಟ್ವಿಟರ್‌ನಲ್ಲಿ ಹಂಚಿಕೊಂಡು, ‘ಜನ ಬೆನ್ನು ತಟ್ಟಿದರೆ ಕೊರೊನಾ ಯೋಧರ ಉತ್ಸಾಹ ಇಮ್ಮಡಿಯಾಗುತ್ತದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.