ADVERTISEMENT

ಪಟಾಕಿ ಸಿಡಿಸಿದರೆ ಕ್ರಮ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2020, 4:33 IST
Last Updated 14 ನವೆಂಬರ್ 2020, 4:33 IST

ಬೆಂಗಳೂರು: ರಾಜ್ಯದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚಲು ಅವಕಾಶ ನೀಡಲಾಗಿದ್ದು, ನಿಯಮ ಉಲ್ಲಂಘಿಸಿ ಹೆಚ್ಚಿನ ಶಬ್ದ ಮತ್ತು ಮಾಲಿನ್ಯ ಉಂಟು ಮಾಡುವ ಪಟಾಕಿಗಳನ್ನು ಸಿಡಿಸಿದರೆ ಅಂತಹವರ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಳ್ಳಲಿದ್ದಾರೆ.

ನಿಯಮ ಉಲ್ಲಂಘಿಸುವವರ ವಿರುದ್ಧ ಸಹಾನುಭೂತಿ ತೋರಬಾರದು. ಶಬ್ದ ಮಾಲಿನ್ಯ ತಡೆಗಟ್ಟಲು ಪೊಲೀಸರ ಜತೆಗೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯೂ ಕ್ರಮ ತೆಗೆದುಕೊಳ್ಳಲಿದೆ ಎಂದು ಸರ್ಕಾರ ಹೊಸದಾಗಿ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT