ADVERTISEMENT

ನಾಗರಿಕ ಸೇವಾ ಮಂಡಳಿ ರಚಿಸಿ: ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2021, 20:37 IST
Last Updated 24 ಏಪ್ರಿಲ್ 2021, 20:37 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಐಎಎಸ್ ಅಧಿಕಾರಿಗಳ ಒಂದು ಹುದ್ದೆಯ ಕನಿಷ್ಠ ಅವಧಿ ಖಾತರಿಪಡಿಸುವ ಸಂಬಂಧ ಕೇಂದ್ರ ನಾಗರಿಕ ಸೇವಾ ಮಂಡಳಿ ರಚಿಸುವ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೊರ್ಟ್‌ ನಿರ್ದೇಶನ ನೀಡಿದೆ.

ವಕೀಲರಾದ ಸುಧಾ ಕಟ್ವಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಜೂ.24ರೊಳಗೆ ಅಫಿಡವಿಟ್ ಸಲ್ಲಿಸುವಂತೆ ನಿರ್ದೇಶನ ನೀಡಿತು.

‘ಟಿಎಸ್‌ಆರ್‌ ಸುಬ್ರಮಣಿಯನ್ ಮತ್ತು ಇತರರ ಪ್ರಕರಣದಲ್ಲಿ 2013ರಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪಿನ ಪ್ರಕಾರ, ನಾಗರಿಕ ಸೇವೆಗೆ ಕನಿಷ್ಠ ಅಧಿಕಾರವಧಿ ನೀತಿ ರೂಪಿಸಬೇಕು’ ಅರ್ಜಿದಾರರು ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.