ADVERTISEMENT

ಇಬ್ಬರು ಬಾಂಗ್ಲಾ ಪ್ರಜೆಗಳ ಬಂಧನ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2019, 20:01 IST
Last Updated 20 ಡಿಸೆಂಬರ್ 2019, 20:01 IST

ಬೆಂಗಳೂರು: ನಕಲಿ ಪಾಸ್‌ಪೋರ್ಟ್ ಬಳಸಿಕೊಂಡು ಮಲೇಷ್ಯಾಗೆ ಹೊರಟಿದ್ದ ಬಾಂಗ್ಲಾದೇಶದ ಇಬ್ಬರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಲಸೆ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.

ಹುಸೈನ್ ಮೊಹಮ್ಮದ್ ಜುಬೇದ್ (18) ಹಾಗೂ ಗುಲಾಬ್ ಮಿಯಾ (35) ಬಂಧಿತರು.

‘ಕೊಲ್ಕತ್ತಾದ ಅಗರ್ತಲಾ ಮೂಲಕ ಆರೋಪಿಗಳು ದೇಶದೊಳಗೆ ಅಕ್ರಮವಾಗಿ ನುಸುಳಿದ್ದರು. ಉದ್ಯೋಗ ಅರಸಿ ಮಲೇಷ್ಯಾಗೆ ಹೋಗಲೆಂದು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಪಾಸ್‌ಪೋರ್ಟ್‌ ಪರಿಶೀಲನೆ ವೇಳೆ ಸಿಕ್ಕಿಬಿದ್ದರು’ ಎಂದು ಪೊಲೀಸರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.