ADVERTISEMENT

ಕ್ರಿಕೆಟ್‌ ಬೆಟ್ಟಿಂಗ್‌ ₹ 1.60 ಲಕ್ಷ ವಶ

​ಪ್ರಜಾವಾಣಿ ವಾರ್ತೆ
Published 8 ಜೂನ್ 2019, 19:37 IST
Last Updated 8 ಜೂನ್ 2019, 19:37 IST

ಬೆಂಗಳೂರು: ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡಗಳ ನಡುವಿನ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಕ್ಕೆ ಸಂಬಂಧಪಟ್ಟಂತೆ ಬೆಟ್ಟಿಂಗ್‌ ಆಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಪೊಲೀಸರು ₹ 1.60 ಲಕ್ಷ ವಶಪಡಿಸಿಕೊಂಡಿದ್ದಾರೆ.

ಗಾಣಿಗರ ಪಾಳ್ಯದ ಸೂರಜ್ ಲೋಬೊ ಬಂಧಿತ ವ್ಯಕ್ತಿ. ತಲಘಟ್ಟಪುರ ವ್ಯಾಪ್ತಿಯ ಪಾಳ್ಯದ ಅಪಾರ್ಟ್‌ಮೆಂಟ್‌ ಒಂದರ ಫ್ಲಾಟ್‌ನಲ್ಲಿ ಮೊಬೈಲ್‌ ಆ್ಯಪ್‌ ನೆರವಿನಿಂದ ಬೆಟ್ಟಿಂಗ್‌ ಆಡುತ್ತಿದ್ದ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಬಂದಿತ್ತು.

ಕಾರ್ಯಪ್ರವೃತ್ತರಾದ ಪೊಲೀಸರು ದಾಳಿ ನಡೆಸಿ ಆರೋಪಿಯಿಂದ ಮೊಬೈಲ್‌ ಮತ್ತು ಬೆಟ್ಟಿಂಗ್‌ಗೆ ಬಳಸುತ್ತಿದ್ದ ಇತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.