ADVERTISEMENT

ಆ್ಯಪ್‌ ಮೂಲಕ ಕ್ರಿಕೆಟ್ ಬೆಟ್ಟಿಂಗ್; ₹ 4 ಲಕ್ಷ ಜಪ್ತಿ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2020, 20:31 IST
Last Updated 15 ಅಕ್ಟೋಬರ್ 2020, 20:31 IST

ಬೆಂಗಳೂರು: ಮೊಬೈಲ್ ಆ್ಯಪ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದಡಿ ಜಮೀರ್ ಅಹಮ್ಮದ್ (39) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ವರ್ತೂರು ಬಳಿಯ ರಾಮಕೃಷ್ಣ ರಸ್ತೆ ನಿವಾಸಿ ಜಮೀರ್, ಮಂಗಳವಾರ (ಅ.13) ನಡೆದಿದ್ದ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಐಪಿಎಲ್ ಕ್ರಿಕೆಟ್ ಪಂದ್ಯದ ವೇಳೆ ಬೆಟ್ಟಿಂಗ್ ನಡೆಸಿದ್ದ. ಆತನಿಂದ ₹4 ಲಕ್ಷ ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

‘ಕ್ರಿಕೆಟ್ ಪಂದ್ಯಗಳ ಸೋಲು ಹಾಗೂ ಗೆಲುವಿನ ಲೆಕ್ಕಾಚಾರದಲ್ಲಿ ಆರೋಪಿ, ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದ. ಆತನ ವಿರುದ್ಧ ವರ್ತೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.