ಬೆಂಗಳೂರು: ಭಾರತ– ಬಾಂಗ್ಲಾದೇಶ ನಡುವೆ ಭಾನುವಾರ ನಡೆದ ಟಿ–20 ಕ್ರಿಕೆಟ್ ಪಂದ್ಯಾವಳಿ ವೇಳೆ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದಡಿ ರೋಹಿತ್ ಕುಮಾರ್ ಜೈನ್ (41) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
‘ಫ್ರೇಜರ್ ಟೌನ್ ನಿವಾಸಿಯಾದ ಆರೋಪಿ ಮೊಬೈಲ್ ಆ್ಯಪ್ ಹಾಗೂ ಕರೆಗಳ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದ. ಆತನಿಂದ ₹ 3.36 ಲಕ್ಷ ನಗದು ಜಪ್ತಿ ಮಾಡಲಾಗಿದೆ’ ಎಂದು ಹಿರಿಯ ಅಧಿಕಾರಿ ಹೇಳಿದರು.
‘ಹೈಗ್ರೌಂಡ್ಸ್ ಠಾಣೆ ವ್ಯಾಪ್ತಿಯ ಮೌರ್ಯ ವೃತ್ತದಲ್ಲಿ ನಿಂತಿದ್ದ ಆರೋಪಿ ಬೆಟ್ಟಿಂಗ್ ಬಗ್ಗೆ ಜನರಿಗೆ ತಿಳಿಸುತ್ತಿದ್ದ. ತಂಡಗಳ ಸೋಲು ಮತ್ತು ಗೆಲುವಿನ ಲೆಕ್ಕಾಚಾರದಲ್ಲಿ ಸಾರ್ವಜನಿಕರಿಂದ ಹಣ ಕಟ್ಟಿಸಿಕೊಳ್ಳುತ್ತಿದ್ದ. ಅದೇ ವೇಳೆ ಸಿಸಿಬಿಯ ವಿಶೇಷ ವಿಚಾರಣಾ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿದ್ದಾರೆ’ ಎಂದು ಹೇಳಿದರು.
‘ಕ್ರಿಕೆಟ್ ಮ್ಯಾಚ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ಇಂಥ ಅಕ್ರಮ ಚಟುವಟಿಕೆಗಳ ಮೇಲೆ ಕಣ್ಣಿಡಲಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.