ADVERTISEMENT

ಮಹಿಳಾ ಕ್ರಿಕೆಟ್‌ ಬೆಟ್ಟಿಂಗ್: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2022, 3:00 IST
Last Updated 19 ಮಾರ್ಚ್ 2022, 3:00 IST

ಬೆಂಗಳೂರು: ಮಹಿಳಾ ಏಕದಿನ ವಿಶ್ವಕಪ್‌ ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿ ಸಂಪತ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ವಿದ್ಯಾರಣ್ಯಪುರ ಠಾಣೆ ವ್ಯಾಪ್ತಿಯ ದೇವಸ್ಥಾನವೊಂದರ ಬಳಿ ಆರೋಪಿ ಸುತ್ತಾಡುತ್ತಿದ್ದ. ಕ್ರಿಕೆಟ್ ಪಂದ್ಯಗಳ ಸೋಲು–ಗೆಲುವು ಲೆಕ್ಕಾಚಾರದಲ್ಲಿ ಜನರಿಂದ ಹಣ ಕಟ್ಟಿಸಿಕೊಳ್ಳುತ್ತಿದ್ದ. ದಾಳಿ ಮಾಡಿ ₹ 1.8 ಲಕ್ಷ ನಗದು ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT