ADVERTISEMENT

ಕ್ರಿಕೆಟ್: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕುಳಿತು ಆ್ಯಪ್‌ ಮೂಲಕ ಬೆಟ್ಟಿಂಗ್ ದಂಧೆ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2023, 16:19 IST
Last Updated 24 ಅಕ್ಟೋಬರ್ 2023, 16:19 IST
ಬೆಟ್ಟಿಂಗ್
ಬೆಟ್ಟಿಂಗ್   

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಕ್ರಿಕೆಟ್ ಪಂದ್ಯದ ವೇಳೆ ಆ್ಯಪ್‌ ಮೂಲಕ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಮಹಾರಾಷ್ಟ್ರದ ಝಕೀವುಲ್ಲಾ ಖಾನ್ ಅಲಿಯಾಸ್ ಝಕಿ (40) ಹಾಗೂ ಮಧ್ಯಪ್ರದೇಶದ ಬಾದಲ್ ಜೈನ್ (30) ಬಂಧಿತರು. ಇವರಿಂದ ಪಂದ್ಯಾವಳಿಯ ಟಿಕೆಟ್ ಹಾಗೂ ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಅ. 20ರಂದು ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ತಂಡಗಳ ನಡುವೆ ಕ್ರಿಕೆಟ್ ಪಂದ್ಯವಿತ್ತು. ಮುಂಗಡವಾಗಿ ಟಿಕೆಟ್ ಕಾಯ್ದಿರಿಸಿದ್ದ ಆರೋಪಿಗಳು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕುಳಿತಿದ್ದರು. ಪಂದ್ಯ ಆರಂಭವಾಗುತ್ತಿದ್ದಂತೆ, ಪ್ರತಿಯೊಂದು ಬಾಲ್ ಹಾಗೂ ಇತರೆ ಮಾಹಿತಿಯನ್ನು ಆ್ಯಪ್‌ನಲ್ಲಿ ದಾಖಲಿಸುತ್ತಿದ್ದರು. ಇದರ ಸಹಾಯದಿಂದಲೇ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು’ ಎಂದು ತಿಳಿಸಿವೆ.

ADVERTISEMENT

‘ಮೈದಾನದಲ್ಲಿ ನಡೆಯುವ ಪಂದ್ಯಕ್ಕೂ ಟಿ.ವಿ.ಯಲ್ಲಿ ಪ್ರಸಾರವಾಗುವ ಪಂದ್ಯಕ್ಕೂ ಕೆಲವು ನಿಮಿಷಗಳ ವ್ಯತ್ಯಾಸವಿರುತ್ತದೆ. ಇದೇ ಕಾರಣಕ್ಕೆ ಆರೋಪಿಗಳು, ಮೈದಾನದಲ್ಲಿ ಕುಳಿತು ಪಂದ್ಯವನ್ನು ವೀಕ್ಷಿಸುತ್ತಲೇ ಬೆಟ್ಟಿಂಗ್ ನಡೆಸುತ್ತಿದ್ದರು’ ಎಂದು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.