ADVERTISEMENT

ಇಂದಿರಾನಗರದಲ್ಲಿ ಕ್ರಿಕೆಟ್ ಬೆಟ್ಟಿಂಗ್; ಐವರ ಬಂಧನ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2020, 4:24 IST
Last Updated 8 ಅಕ್ಟೋಬರ್ 2020, 4:24 IST

ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್ ವಿರುದ್ಧ ಇಂದಿರಾನಗರ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಈ ಸಂಬಂಧ ಐವರನ್ನು ಬಂಧಿಸಿದ್ದಾರೆ.

ಕೋರಮಂಗಲ ಅಂಬೇಡ್ಕರ್ ನಗರದ ನಯೀಮ್ (44), ಅಲೆಕ್ಸಾಂಡರ್ (24), ರಾಜೇಂದ್ರನಗರದ ಸುಬ್ಬಯ್ಯ (40), ಫಾರೂಕ್ (48) ಹಾಗೂ ಏಜಾಜ್ (45) ಬಂಧಿತರು. ಅವರಿಂದ ₹ 56 ಸಾವಿರ ನಗದು ಹಾಗೂ 5 ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ.

‘ಕ್ರಿಕೆಟ್ ಬುಕ್ಕಿಯೊಂದಿಗೆ ಸಂಪರ್ಕವಿಟ್ಟುಕೊಂಡಿದ್ದ ಆರೋಪಿಗಳು, ಆತನ ನಿರ್ದೇಶನದಂತೆ ಬೆಟ್ಟಿಂಗ್ ಆಡಿಸುತ್ತಿದ್ದರು. ಇಂದಿರಾನಗರ ಬಳಿಯ ಬಿಡಿಎ ಕಾಂಪ್ಲೆಕ್ಸ್ ಸಮೀಪ ಮಂಗಳವಾರ ಕಾಣಿಸಿಕೊಂಡಿದ್ದರು. ಕೆಲವರಿಂದ ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದರು. ಖಚಿತ ಮಾಹಿತಿ ಪಡೆದು ದಾಳಿ ಮಾಡಿ ಅವರನ್ನು ಬಂಧಿಸಲಾಯಿತು’ ಎಂದು ಪೂರ್ವ ವಿಭಾಗದ ಡಿಸಿಪಿ ಎಸ್.ಡಿ.ಶರಣಪ್ಪ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.