ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಯಶವಂತಪುರದ ತ್ರಿವೇಣಿ ರಸ್ತೆಯ ನಿವಾಸಿ ವಿನಯ್‌ಕುಮಾರ್ (33) ಬಂಧಿತ ವ್ಯಕ್ತಿ. ಆರೋಪಿಯಿಂದ ₹ 41 ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ.
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ಏಕದಿನ ಕ್ರಿಕೆಟ್ ಪಂದ್ಯದ ಸೋಲು ಗೆಲುವಿನ ಮೇಲೆ ಆರೋಪಿ ಮನೆಯಲ್ಲಿದ್ದೇ ಬೆಟ್ಟಿಂಗ್‌ಗೆ ಹಣ ಕಟ್ಟಿಸಿಕೊಳ್ಳುತ್ತಿದ್ದ. ಖಚಿತ ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.
ಜೂಜಾಟ– ಬಂಧನ: ವಿವೇಕನಗರ ಮುಖ್ಯರಸ್ತೆಯ ಎಬಿಸಿ ಗ್ರೌಂಡ್‌ನಲ್ಲಿ ಜೂಜು ಆಡುತ್ತಿದ್ದ ಆರು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ ₹ 16,700 ನಗದು ವಶಪಡಿಸಿಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.