ಬಂಧನ
ಪ್ರಾತಿನಿಧಿಕ ಚಿತ್ರ
ಆನೇಕಲ್: ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಬುಕ್ಕಿಯೊಬ್ಬನನ್ನು ಆನೇಕಲ್ ತಾಲ್ಲೂಕಿನ ಜಿಗಣಿ ಪೊಲೀಸರು ಗುರುವಾರ ಬಂಧಿಸಿ ಆರೋಪಿಯಿಂದ ಐಫೋನ್ ಸೇರಿದಂತೆ ಆರು ಮೊಬೈಲ್ ಮತ್ತು ₹1ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.
ಪಾವಗಡದ ಗೋವಿಂದರಾಜು ಬಂಧಿತ ಆರೋಪಿ.
ಟೆಕಿ ಗೋವಿಂದರಾಜು ಜಿಗಣಿ ಸಮೀಪದ ಬುಕ್ಕಸಾಗರದಲ್ಲಿ ವಾಸವಿದ್ದ, ಚಾಂಪಿಯನ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬೆಟ್ಟಿಂಗ್ ನಡೆಸಿದ್ದ. ಮನೆಯಲ್ಲಿಯೇ ಕುಳಿತು ಬೆಟ್ಟಿಂಗ್ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ ಎಂದು ಜಿಗಣಿ ಪೊಲೀಸರು ತಿಳಿಸಿದ್ದಾರೆ.
ಆರೋಪಿಯಿಂದ ಆರು ಮೊಬೈಲ್, 50ಕ್ಕೂ ಹೆಚ್ಚು ವಿವಿಧ ಕಂಪನಿಯ ಸಿಮ್ ಕಾರ್ಡ್, ₹1.18ಲಕ್ಷ ನಗದು ವಶಪಡಿಸಿಕೊಳ್ಳ ಲಾಗಿದೆ. ಬುಕ್ಕಿಯ ಹೆಸರಿನಲ್ಲಿ ಬ್ಯಾಂಕ್ ಖಾತೆಯಲ್ಲಿ ₹11 ಲಕ್ಷ ಹಣವನ್ನು ಫ್ರೀಜ್ ಮಾಡು ವಂತೆ ಬ್ಯಾಂಕ್‌ಗೆ ಮಾಹಿತಿ ನೀಡಿ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಗಣಿ ಪೊಲೀಸ್ ಇನ್‌ಸ್ಪೆಕ್ಟರ್ ಮಂಜುನಾಥ್ ತಿಳಿಸಿದ್ದಾರೆ.
ಎಂಜಿನಿಯರಿಂಗ್ ಪದವಿ ಪಡೆದಿದ್ದ ಗೋವಿಂದರಾಜು ಬೆಟ್ಟಿಂಗ್‌ನ್ನು ದಂಧೆಯನ್ನಾಗಿ ಮಾಡಿಕೊಂಡಿದ್ದ. ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ ಬುಕ್ಕಿಗಳೊಂದಿಗೆ ಪರಿಚಯವಾಗಿತ್ತು. ಬಳಿಕ ಗೋವಿಂದರಾಜು ಬೆಟ್ಟಿಂಗ್‌ನ್ನೇ ದಂಧೆಯಾಗಿ ಆರಂಭಿಸಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.