ADVERTISEMENT

ಕ್ರಿಕೆಟಿಗ ರಾಹುಲ್ ದ್ರಾವಿಡ್ ಖಾತೆಗಳು ಸ್ಥಗಿತ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2018, 19:30 IST
Last Updated 27 ಡಿಸೆಂಬರ್ 2018, 19:30 IST
ರಾಹುಲ್ ದ್ರಾವಿಡ್
ರಾಹುಲ್ ದ್ರಾವಿಡ್   

ಬೆಂಗಳೂರು: ಹೆಚ್ಚಿನ ಲಾಭಾಂಶದ ಆಮಿಷವೊಡ್ಡಿ ಜನರಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿ ವಂಚಿಸಿದ್ದ ‘ವಿಕ್ರಮ್ ಇನ್ವೆಸ್ಟ್‌ಮೆಂಟ್‌’ ಕಂಪನಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದ್ದ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ.

’ಕಂಪನಿಯಲ್ಲಿ ಹೂಡಿದ್ದ ಹಣಕ್ಕಿಂತ ಮೂರು ಪಟ್ಟು ಹೆಚ್ಚು ಲಾಭವನ್ನು ದ್ರಾವಿಡ್ ಪಡೆದಿರುವ ಮಾಹಿತಿ ಇದೆ. ಹೀಗಾಗಿ, ಅವರ ಎರಡು ಬ್ಯಾಂಕ್ ಖಾತೆಗಳನ್ನು ಸದ್ಯಕ್ಕೆ ಸ್ಥಗಿತಗೊಳಿಸಿ ತನಿಖೆ ಮುಂದುವರಿಸಿದ್ದೇವೆ’ ಎಂದು ಸಿಐಡಿ ಅಧಿಕಾರಿಯೊಬ್ಬರು ತಿಳಿಸಿದರು.

‘ಕಂಪನಿ ನಿರ್ದೇಶಕ ರಾಘವೇಂದ್ರ ಶ್ರೀನಾಥ್‌ ಅವರ ನಾಲ್ಕು ಫ್ಲ್ಯಾಟ್‌ಗಳು, ಖಾತೆಯಲ್ಲಿದ್ದ ₹75 ಲಕ್ಷ ನಗದು, ಎಲ್‌ಐಸಿ ಬಾಂಡ್‌ಗಳು, 6 ಕಾರು, 100 ಗ್ರಾಂ ಚಿನ್ನಾಭರಣ, 4 ಕೆ.ಜಿ ಬೆಳ್ಳಿ ಸಹ ಜಪ್ತಿ ಮಾಡಲಾಗಿದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.