ADVERTISEMENT

ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಬೆಂಗಳೂರಿನ 'ಒನ್‌8 ಕಮ್ಯೂನ್‌' ವಿರುದ್ಧ ಪ್ರಕರಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಜೂನ್ 2025, 6:06 IST
Last Updated 2 ಜೂನ್ 2025, 6:06 IST
<div class="paragraphs"><p>'ಒನ್‌ 8 ಕಮ್ಯೂನ್‌' ಹಾಗೂ ಒಳಚಿತ್ರದಲ್ಲಿ ವಿರಾಟ್‌ ಕೊಹ್ಲಿ</p></div>

'ಒನ್‌ 8 ಕಮ್ಯೂನ್‌' ಹಾಗೂ ಒಳಚಿತ್ರದಲ್ಲಿ ವಿರಾಟ್‌ ಕೊಹ್ಲಿ

   

ಪಿಟಿಐ ಚಿತ್ರ

ಬೆಂಗಳೂರು: ಕ್ರಿಕೆಟಿಗ ವಿರಾಟ್ ಕೊಹ್ಲಿ ಸಹ-ಮಾಲೀಕತ್ವದ 'ಒನ್8 ಕಮ್ಯೂನ್' ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ ವಿರುದ್ಧ ಕಬ್ಬನ್‌ ಪಾರ್ಕ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ADVERTISEMENT

ಧೂಮಪಾನ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದ ಮಹಾತ್ಮಾ ಗಾಂಧಿ ರಸ್ತೆ ಸಮೀಪದಲ್ಲಿರುವ 'ಒನ್8 ಕಮ್ಯೂನ್' ವಿರುದ್ಧ ಸ್ಥಳೀಯ ನ್ಯಾಯಾಲಯದ ಅನುಮತಿ ಪಡೆದು, 'ತಂಬಾಕು ಉತ್ಪನ್ನಗಳ ಸಾರ್ವಜನಿಕ ಬಳಕೆ ನಿಯಂತ್ರಣ ಕಾಯ್ದೆ' (ಕೋಟ್ಪಾ) ಅಡಿಯಲ್ಲಿ ಮೇ 31ರಂದು ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ.

ಧೂಮಪಾನ ನಿಯಂತ್ರಣಕ್ಕೆ ಸಂಬಂಧಿತ ನಿಯಮಗಳ ಉಲ್ಲಂಘನೆ ತಡೆಯುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಮೇ 29 ರಂದು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದರು. ನಿಯಮ ಉಲ್ಲಂಘನೆಯಾಗಿರುವುದು ಆ ವೇಳೆ ಬೆಳಕಿಗೆ ಬಂದಿತ್ತು.

ರೆಸ್ಟೋರೆಂಟ್‌ನಲ್ಲಿ ಧೂಮಪಾನ ಮಾಡಲು ನಿರ್ದಿಷ್ಟ ಸ್ಥಳ ನಿಗದಿಪಡಿಸದಿರುವುದು ನಿಯಮದ ಸ್ಪಷ್ಟ ಉಲ್ಲಂಘನೆಯಾಗಿದೆ. ಪಬ್‌ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಕೊಹ್ಲಿ ಸಹ ಮಾಲೀಕತ್ವದ 'ಒನ್8 ಕಮ್ಯೂನ್' ಈ ರೀತಿ ಸುದ್ದಿಯಾಗುತ್ತಿರುವುದು ಇದೇ ಮೊದಲಲ್ಲ.

ನಿಗದಿತ ಸಮಯ ಮೀರಿದರೂ ತೆರೆದಿದ್ದ ಕಾರಣ 2024ರ ಜುಲೈನಲ್ಲಿ ಕಬ್ಬನ್‌ ಪಾರ್ಕ್‌ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದರು. ಅಗ್ನಿಶಾಮಕ ದಳದಿಂದ ನಕ್ಷೆ, ಪ್ರಮಾಣ ಪತ್ರ, ಎನ್‌ಒಸಿ, ಪರವಾನಗಿ ಪಡೆಯದೆ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ ನಡೆಸಲಾಗುತ್ತಿದೆ ಎಂಬ ಆರೋಪ ಅದೇ ವರ್ಷ ಡಿಸೆಂಬರ್‌ನಲ್ಲಿ ಕೇಳಿಬಂದಿತ್ತು. ಆ ವಿಚಾರವಾಗಿ ಬಿಬಿಎಂಪಿ ನೋಟಿಸ್‌ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.