ADVERTISEMENT

ವಾಹನ ಗುದ್ದಿ ಪಾದಚಾರಿ ಸಾವು

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2022, 19:34 IST
Last Updated 10 ಏಪ್ರಿಲ್ 2022, 19:34 IST

ಬೆಂಗಳೂರು: ಚಿಕ್ಕಜಾಲ ಸಂಚಾರ ಠಾಣೆ ವ್ಯಾಪ್ತಿಯ ಬೆಳ್ಳಹಳ್ಳಿ ಮೇಲ್ಸೇತುವೆಯಲ್ಲಿ ಶನಿವಾರ ನಡೆದುಕೊಂಡು ಹೋಗುತ್ತಿದ್ದ ಮುನಿರಾಜು (50) ಎಂಬುವರು ಟಾಟಾ ಏಸ್‌ ವಾಹನ ಗುದ್ದಿ ಮೃತಪಟ್ಟಿದ್ದಾರೆ.

‘ಮುನಿರಾಜು ಮಗನ ಜೊತೆ ಹೊರಟಿದ್ದರು. ವಾಹನ ಗುದ್ದಿ ‘ತಲೆಗೆ ತೀವ್ರ ಪೆಟ್ಟಾಗಿದ್ದ ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ಕರೆದೊಯ್ಯ ಲಾಗಿತ್ತು. ಅಲ್ಲಿ ವೈದ್ಯರು, ಮುನಿರಾಜು ಮೃತಪಟ್ಟಿರುವುದಾಗಿ ಹೇಳಿದರು’.‘ಟಾಟಾ ಏಸ್ ವಾಹನ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ. ಆತನ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT