ಬೆಂಗಳೂರು: ಪಶ್ಚಿಮ ವಿಭಾಗದ ಪೊಲೀಸರು ಎರಡು ಪ್ರಕರಣಗಳಲ್ಲಿ ಏಳು ಮಂದಿಯನ್ನು ಬಂಧಿಸಿದ್ದಾರೆ.
ಚಾಮರಾಜಪೇಟೆಯ ಮೊಮೀನ್ ಪಾಷಾ, ಅನ್ವರ್ ಪಾಷಾ, ಬ್ಯಾಟರಾಯನಪುರದ ಶಾಮಣ್ಣ ಗಾರ್ಡನ್‌ನ ಕೌಶಿಕ್, ವೀರ, ಜೈಕಾರ್, ರಾಜು, ಕಾರ್ತಿಕ್ ಬಂಧಿತ ಆರೋಪಿಗಳು.
‘ಚಾಮರಾಜಪೇಟೆ ಹಾಗೂ ಬ್ಯಾಟರಾಯನಪುರ ಠಾಣಾ ವ್ಯಾಪ್ತಿಗಳಲ್ಲಿ ರೌಡಿ ಮನೆಗಳ ಮೇಲೆ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಚಾಮರಾಜಪೇಟೆ ವ್ಯಾಪ್ತಿಯಲ್ಲಿ ಇಬ್ಬರು ಮತ್ತು ಬ್ಯಾಟರಾಯನಪುರ ವ್ಯಾಪ್ತಿಯಲ್ಲಿ ಐದು ಮಂದಿ ಸಿಕ್ಕಿಬಿದ್ದರು. ಆರೋಪಿಗಳಿಂದ ಮಾರಕಾಸ್ತ್ರಗಳನ್ನು ಜಪ್ತಿ ಮಾಡಿ, ಶಸ್ತ್ರಾಸ್ತ್ರ ಕಾಯ್ದೆಯಡಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
33 ಮಂದಿಗೆ ವೈದ್ಯಕೀಯ ಪರೀಕ್ಷೆ:‘ಮಾದಕ ವಸ್ತುಗಳನ್ನು ಸೇವಿಸಿರುವ ಶಂಕೆಯ ಮೇರೆಗೆ ಎರಡೂ ಠಾಣಾ ವ್ಯಾಪ್ತಿಗಳಲ್ಲಿ ಹಲವರ ಮನೆಗಳಲ್ಲಿ ಪರಿಶೀಲನೆ ನಡೆಸಲಾಯಿತು. ಒಟ್ಟು 33 ಮಂದಿಗೆ ವೈದ್ಯಕೀಯ ತಪಾಸಣೆ ನಡೆಸಲಾಯಿತು. ಹೊರ ರಾಜ್ಯಗಳ ಡ್ರಗ್ ಪೆಡ್ಲರ್‌ಗಳ ಜೊತೆ ಸಂಪರ್ಕ ಇರುವ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.