ADVERTISEMENT

ಕ್ರಿಕೆಟ್ ಬೆಟ್ಟಿಂಗ್; ₹ 10 ಲಕ್ಷ ಜಪ್ತಿ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2020, 3:10 IST
Last Updated 8 ನವೆಂಬರ್ 2020, 3:10 IST

ಬೆಂಗಳೂರು: ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ವೇಳೆ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದು, ಅವರಿಂದ ₹ 10 ಲಕ್ಷ ನಗದು ಜಪ್ತಿ ಮಾಡಿದ್ದಾರೆ.

‘ಅರುಣ್ ಜೈನ್ ಹಾಗೂ ನವೀನ್ ಬಂಧಿತರು. ಆನ್‌ಲೈನ್‌ ಹಾಗೂ ಆ್ಯಪ್‌ಗಳ ಮೂಲಕ ಆರೋಪಿಗಳು ಬೆಟ್ಟಿಂಗ್ ನಡೆಸುತ್ತಿದ್ದರು. ಪಂದ್ಯಗಳ ಸೋಲು–ಗೆಲುವು ಲೆಕ್ಕಾಚಾರದಲ್ಲಿ ಹಣ ಕಟ್ಟಿಸಿಕೊಳ್ಳುತ್ತಿದ್ದರು’ ಎಂದು ಪೊಲೀಸರು ಹೇಳಿದರು.

’ಐಪಿಎಲ್ ಆರಂಭವಾದಾಗಿನಿಂದಲೂ ಆರೋಪಿಗಳು ಬೆಟ್ಟಿಂಗ್ ನಡೆಸುತ್ತಿದ್ದರು. ಶುಕ್ರವಾರ ರಾತ್ರಿ ನಡೆದ ಪಂದ್ಯಕ್ಕೂ ಹಣ ಕಟ್ಟಿಸಿಕೊಂಡಿದ್ದರು. ಈ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಅವರ ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ’ ಎಂದೂ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.