ಬೆಂಗಳೂರು: ನಗರದ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬೇಗೂರು ಪೊಲೀಸರು ಬಂಧಿಸಿದ್ದು, ₹4.40 ಲಕ್ಷ ಮೌಲ್ಯದ 11 ಕೆ.ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಪಶ್ಚಿಮ ಬಂಗಾಳದ ಮೊಹಮ್ಮದ್ ರಿಪುನ್, ಮೋಹರ್ ಅಲಿ, ಮೊಹಮ್ಮದ್ ಆಲಂಗೀರ್ ಬಂಧಿತರು.
ಆರೋಪಿಗಳು ಪಶ್ಚಿಮ ಬಂಗಾಳದ ರೈತರಿಂದ ಗಾಂಜಾ ಪಡೆದು, ರೈಲಿನಲ್ಲಿ ಬೆಂಗಳೂರಿಗೆ ಬರುತ್ತಿದ್ದರು. ಇಲ್ಲಿನ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.