ADVERTISEMENT

ಅಪಹರಣ ಪ್ರಕರಣ: ಆರೋಪಿ ಕಾಲಿಗೆ ಗುಂಡೇಟು

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2020, 6:46 IST
Last Updated 29 ಆಗಸ್ಟ್ 2020, 6:46 IST
ಆರೋಪಿ ಮೊಹಮ್ಮದ್ ಝೈನಾ
ಆರೋಪಿ ಮೊಹಮ್ಮದ್ ಝೈನಾ   

ಬೆಂಗಳೂರು: ಭಾರತಿನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಅಪಹರಣ ಪ್ರಕರಣದ ಆರೋಪಿ ಮೊಹಮ್ಮದ್ ಝೈನಾ ಎಂಬಾತನನ್ನು ಕಾಲಿಗೆ ಗುಂಡು ಹಾರಿಸಿ ಪೊಲೀಸರು ಸೆರೆ ಹಿಡಿದಿದ್ದಾರೆ.

ಅಪಹರಣ ಪ್ರಕರಣದಲ್ಲಿ ಭಾಗಿಯಾಗಿದ್ದ ನಂತರ ಆರೋಪಿ ಪರಾರಿಯಾಗಿದ್ದ. ಶ್ಯಾಂಪುರ ರೈಲ್ವೆ ಗೇಟ್‌ ಶನಿವಾರ ಕಾಣಿಸಿಕೊಂಡಿದ್ದ. ಬಂಧಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಯತ್ನಿಸಿದ್ದ.

ಆತ್ಮರಕ್ಷಣೆಗಾಗಿ ಇನ್‌ಸ್ಪೆಕ್ಟರ್ ಆನಂದ್ ನಾಯ್ಕ ಅವರು ಆರೋಪಿಯ ಬಲ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಗಾಯಗೊಂಡಿರುವ ಆರೋಪಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.