ADVERTISEMENT

ಕದ್ದ ವಾಹನ ಮಾರಿ ಮೋಜು– ಮಸ್ತಿ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2022, 21:18 IST
Last Updated 1 ಸೆಪ್ಟೆಂಬರ್ 2022, 21:18 IST
ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ಆರೋಪಿಯಿಂದ ಜಪ್ತಿ ಮಾಡಿರುವ ಬೈಕ್‌ಗಳು
ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ಆರೋಪಿಯಿಂದ ಜಪ್ತಿ ಮಾಡಿರುವ ಬೈಕ್‌ಗಳು   

ಬೆಂಗಳೂರು: ಸಾರ್ವಜನಿಕ ಸ್ಥಳ ಹಾಗೂ ಮನೆ ಮುಂದೆ ನಿಲ್ಲಿಸುವ ದ್ವಿಚಕ್ರ ವಾಹನ ಕದಿಯುತ್ತಿದ್ದ ಆರೋಪಿ ಶಬ್ಬೀರ್ ಪಾಷಾ ಎಂಬುವರನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

‘ಹಲವು ತಿಂಗಳಿನಿಂದ ಕೃತ್ಯ ಎಸಗುತ್ತಿದ್ದ ಆರೋಪಿ, ಕದ್ದ ವಾಹನಗಳ ಮಾರಾಟದಿಂದ ಬರುತ್ತಿದ್ದ ಹಣದಲ್ಲಿ ಮೋಜು–ಮಸ್ತಿ ಮಾಡುತ್ತಿದ್ದ. ಹಣ ಖಾಲಿಯಾಗುತ್ತಿದ್ದಂತೆ ಪುನಃ ವಾಹನ ಕದಿಯುತ್ತಿದ್ದ’ ಎಂದು ಪೊಲೀಸರು ಹೇಳಿದರು.

‘ಪಶ್ಚಿಮ ಕಾರ್ಡ್ ರಸ್ತೆ ಬಳಿಯ ಮನೆಯೊಂದರ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಇತ್ತೀಚೆಗೆ ಕಳ್ಳತನವಾಗಿತ್ತು. ಈ ಬಗ್ಗೆ ದಾಖಲಾದ ಪ್ರಕರಣದ ತನಿಖೆ ಕೈಗೊಂಡಾಗ ಆರೋಪಿ ಶಬ್ಬೀರ್ ಸಿಕ್ಕಿಬಿದ್ದ. ಈತನಿಂದ ₹2 ಲಕ್ಷ ಮೌಲ್ಯದ 5 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಬಸವೇಶ್ವರನಗರ, ಎಸ್‌.ಜೆ.ಪಾರ್ಕ್ ಹಾಗೂ ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಠಾಣೆ ವ್ಯಾಪ್ತಿಯಲ್ಲೂ ಆರೋಪಿ ಕೃತ್ಯ ಎಸಗಿದ್ದ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.