ಬೆಂಗಳೂರು: ಬನಶಂಕರಿಯ ಕಾವೇರಿ ನಗರದಲ್ಲಿ ಸೋಮವಾರ ರಾತ್ರಿ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ಧಾರೆ.
ವಿಕ್ರಂ(21) ಕೊಲೆಯಾದ ವ್ಯಕ್ತಿ. ಕೊಲೆ ಮಾಡಿದ ಆರೋಪದಡಿ ರೌಡಿಶೀಟರ್ ವಸೀಂ(28) ಎಂಬಾತನನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಆರೋಪಿ ಹಾಗೂ ಕೊಲೆಯಾದ ಯುವಕ ಒಂದೇ ಬಡಾವಣೆಯಲ್ಲಿ ನೆಲೆಸಿದ್ದರು. ಕೆಲವು ದಿನಗಳ ಹಿಂದೆ ವಸೀಂ ಹಾಗೂ ವಿಕ್ರಂ ಮಧ್ಯೆ ಗಲಾಟೆ ನಡೆದು, ವಸೀಂ ಮೇಲೆ ಹಲ್ಲೆ ನಡೆಸಲಾಗಿತ್ತು. ಹಲ್ಲೆಯಿಂದ ಕುಪಿತಗೊಂಡಿದ್ದ ಆರೋಪಿ, ಕೊಲೆಗೆ ಸಂಚು ರೂಪಿಸಿದ್ದ. ಸೋಮವಾರ ಸಂಜೆ ಕಾವೇರಿ ನಗರದ ಎಂಟನೇ ಕ್ರಾಸ್‌ನಲ್ಲಿ ಸ್ನೇಹಿತನ ಜೊತೆ ವಿಕ್ರಂ ನಿಂತಿದ್ದರು. ಆಗ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
ಬನಶಂಕರಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.