ADVERTISEMENT

80 ಮೊಬೈಲ್‌ ವಶ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 19 ಜನವರಿ 2021, 17:17 IST
Last Updated 19 ಜನವರಿ 2021, 17:17 IST
ಆರೋಪಿಗಳಿಂದ ವಶಕ್ಕೆ ಪಡೆದಿರುವ ಮೊಬೈಲ್‌ಗಳು ಹಾಗೂ ಸ್ಕೂಟರ್
ಆರೋಪಿಗಳಿಂದ ವಶಕ್ಕೆ ಪಡೆದಿರುವ ಮೊಬೈಲ್‌ಗಳು ಹಾಗೂ ಸ್ಕೂಟರ್   

ಬೆಂಗಳೂರು: ನಡುರಸ್ತೆಯಲ್ಲಿ ಸಾರ್ವಜನಿಕರನ್ನು ಅಡ್ಡಗಟ್ಟಿ, ಚಾಕು ತೋರಿಸಿ ಮೊಬೈಲ್ ಹಾಗೂ ನಗದು ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪಶ್ಚಿಮ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಅಶೋಕ್‌ ಕುಮಾರ್ ಹಾಗೂ ಆಂಜನೇಯಲು ಬಂಧಿತ ಆರೋಪಿಗಳು.

ಜ.14ರಂದು ಉಪ್ಪಾರಪೇಟೆ ಠಾಣಾ ವ್ಯಾಪ್ತಿಯ ಬಿಎಂಟಿಸಿ ಡಿಪೊ ಬಳಿಗೆಸ್ಕೂಟರ್‌ನಲ್ಲಿ ಬಂದಿದ್ದ ಆರೋಪಿಗಳು, ಅಲ್ಲಿ ಹೋಗುತ್ತಿದ್ದ ಸಾರ್ವಜನಿಕರಿಗೆ ಚಾಕು ತೋರಿಸಿ,ಮೊಬೈಲ್ ಕಸಿದು ಪರಾರಿಯಾಗಿದ್ದರು. ಈ ಸಂಬಂಧ ಉಪ್ಪಾರಪೇಟೆ ಠಾಣೆಯಲ್ಲಿ ದೂರು ದಾಖಲಾಗಿತ್ತು.

ADVERTISEMENT

‘ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ, ನಗರದ ವಿವಿಧ ಭಾಗಗಳಲ್ಲಿ ಮೊಬೈಲ್ ಕಳ್ಳತನ ಮಾಡಿರುವುದಾಗಿ ತಿಳಿಸಿದರು. ದಸ್ತಗಿರಿ ಮಾಡಿ, ಬಂಧಿತರಿಂದ ವಿವಿಧ ಕಂಪನಿಗಳ 80 ಮೊಬೈಲ್‌ಗಳು, ₹10 ಸಾವಿರ ನಗದು ಮತ್ತು ಕೃತ್ಯಕ್ಕೆ ಬಳಸುತ್ತಿದ್ದ ಚಾಕು, ಬೈಕ್‌ ಅನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳ ವಿರುದ್ಧ ಸುಲಿಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ‘ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.