ಬೆಂಗಳೂರು: ಎಚ್‌ಬಿಆರ್ ಲೇಔಟ್ ಬಳಿಯ ಹೊರ ವರ್ತುಲ ರಸ್ತೆಯಲ್ಲಿ ಸೈಯದ್ ಜುಬೇರ್ ಎಂಬುವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿರುವ ಜುಬೇರ್ ಅವರನ್ನು ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
‘ಫೈನಾನ್ಶಿಯರ್ ಆಗಿರುವ ಜುಬೇರ್ ಶುಕ್ರವಾರ ರಾತ್ರಿ ಹೊರವರ್ತುಲ ರಸ್ತೆಯಲ್ಲಿ ಹೊರಟಿದ್ದರು. ಬೈಕ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳಿಬ್ಬರ ಪೈಕಿ ಒಬ್ಬಾತ, ಪಿಸ್ತೂಲ್‌ನಿಂದ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದ. ರಸ್ತೆಯಲ್ಲೇ ನರಳುತ್ತ ಬಿದ್ದಿದ್ದ
ಜುಬೇರ್ ಅವರನ್ನು ಸ್ಥಳೀಯರೇ ಆಸ್ಪತ್ರೆಗೆ ದಾಖಲಿಸಿದ್ದಾರೆ’ ಎಂದು ಕೆ.ಜಿ.ಹಳ್ಳಿ ಪೊಲೀಸರು ಹೇಳಿದರು.
‘ಹೆಲ್ಮೆಟ್ ಧರಿಸಿಕೊಂಡು ಬೈಕ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳು ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಹಣಕಾಸಿನ ವ್ಯವಹಾರ ಹಾಗೂ ಹಳೇ ವೈಷಮ್ಯದಿಂದ ಈ ಘಟನೆ ನಡೆದಿರುವ ಅನುಮಾನವಿದೆ. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.