ADVERTISEMENT

ಹೊಸ ವರ್ಷಾಚರಣೆ ದಿನ ಕುಡಿದು ವಾಹನ ಓಡಿಸಿದರೆ ಕ್ರಿಮಿನಲ್ ಕೇಸ್

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2019, 6:32 IST
Last Updated 28 ಡಿಸೆಂಬರ್ 2019, 6:32 IST
   

ಬೆಂಗಳೂರು: ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಡಿ. 31ರರಾತ್ರಿ ಯಾರಾದರೂ ಮದ್ಯ ಕುಡಿದು ವಾಹನ ಚಲಾಯಿಸಿದರೆ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಪೊಲೀಸರು ತೀರ್ಮಾನಿಸಿದ್ದಾರೆ.

ಶನಿವಾರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿರುವ ನಗರ ಸಂಚಾರ ವಿಭಾಗದ ಜಂಟಿ ಕಮಿಷನರ್ ರವಿಕಾಂತೇಗೌಡ, 'ಅಂದು ಕುಡಿದು ವಾಹನ ಚಲಾಯಿಸಬೇಡಿ.ಚಲಾಯಿಸಿ ಸಿಕ್ಕಿಬಿದ್ದರೆ ನಿರ್ಲಕ್ಷ್ಯ ಆರೋಪದಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು' ಎಂದರು.

'ಹೊಸ ವರ್ಷಾಚರಣೆಗೆ ಈ ಬಾರಿ 175 ಸ್ಥಳಗಳಲ್ಲಿ ಮದ್ಯ ತಪಾಸಣೆ ನಡೆಸಲಾಗುವುದು' ಎಂದರು. ಅಂದು ಬಾರ್ ಆ್ಯಂಡ್ ರೆಸ್ಟೊರೆಂಟ್‌ಗಳು 2 ಗಂಟೆವರೆಗೆ ತೆರೆದಿರಲಿವೆ‌.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.