ADVERTISEMENT

ಉತ್ತಮ ಫಲಿತಾಂಶ ಪಡೆದ ಕ್ರೈಸ್ ವಸತಿ ಶಾಲೆಗಳು

​ಪ್ರಜಾವಾಣಿ ವಾರ್ತೆ
Published 3 ಮೇ 2025, 15:43 IST
Last Updated 3 ಮೇ 2025, 15:43 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಒಟ್ಟು ಶೇ 62.34 ಫಲಿತಾಂಶ ‍ಬಂದಿದ್ದರೆ, ಸಮಾಜ ಕಲ್ಯಾಣ ಇಲಾಖೆಯಡಿ ಇರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಶಾಲೆಗಳು ಶೇ 91 ಫಲಿತಾಂಶ ಪಡೆದು ಉತ್ತಮ ಸಾಧನೆ ಮಾಡಿವೆ. 

ಸರ್ಕಾರದ ಇತರೆ ಶಾಲೆಗಳು ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳಿಗಿಂತ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮಕ್ಕಳು ಫಲಿತಾಂಶವಾರು  ಶೇ 28ರಷ್ಟು ಅಧಿಕ ಸಾಧನೆ ಮಾಡಿದ್ದಾರೆ.

ADVERTISEMENT

ಕ್ರೈಸ್ ಎಂಬುದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವಾಗಿದ್ದು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಉಚಿತವಾಗಿ ವಸತಿ ಶಿಕ್ಷಣವನ್ನು ನೀಡುವ ಸಂಸ್ಥೆ‌.

ಅಲೆಮಾರಿಗಳು, ಪೌರಕಾರ್ಮಿಕರು, ಮಾಜಿ ದೇವದಾಸಿಯರ ಮಕ್ಕಳು, ಜೀತ ಮುಕ್ತ ಮಕ್ಕಳು, ಅಂಗವಿಕಲರು, ಸ್ಮಶಾನ ಕಾರ್ಮಿಕರ ಮಕ್ಕಳು, ಏಕ ಪೋಷಕರ, ಚಿಂದಿ ಆಯುವವರ ಮಕ್ಕಳಿಗೆ ಯಾವುದೇ ಪ್ರವೇಶ ಪರೀಕ್ಷೆ ಇಲ್ಲದೇ ನೇರವಾಗಿ ಶಾಲಾ ದಾಖಲಾತಿಯನ್ನು ಕ್ರೈಸ್‌ನಲ್ಲಿ ನೀಡಲಾಗುತ್ತದೆ. ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 34,984 ವಿದ್ಯಾರ್ಥಿಗಳು ಹಾಜರಾಗಿದ್ದು, 31,726 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ 34.10ರಷ್ಟು ವಿದ್ಯಾರ್ಥಿಗಳು ಉನ್ನತ ದರ್ಜೆಯಲ್ಲಿ ಶೇ 55.90 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಕ್ರೈಸ್‌ ಕಾರ್ಯ ನಿರ್ವಾಹಕ ನಿರ್ದೇಶಕ ಕಾಂತರಾಜು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.