ADVERTISEMENT

ಕಬ್ಬನ್‌ ಉದ್ಯಾನ ಸಂರಕ್ಷಣಾ ಸಮಿತಿ ರಚನೆ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2023, 19:42 IST
Last Updated 2 ನವೆಂಬರ್ 2023, 19:42 IST
ಕಬ್ಬನ್ ಉದ್ಯಾನ
ಕಬ್ಬನ್ ಉದ್ಯಾನ   

ಬೆಂಗಳೂರು: ಕಬ್ಬನ್‌ ಉದ್ಯಾನವನ್ನು ಸಂರಕ್ಷಿಸುವ ಉದ್ದೇಶದಿಂದ ತೋಟಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಂರಕ್ಷಣಾ ಸಮಿತಿಯನ್ನು ರಚಿಸಿ ಸರ್ಕಾರ ಆದೇಶ ಹೊರಡಿಸಿದೆ. 

ಈ ಸಮಿತಿಯು 33 ಸದಸ್ಯರನ್ನು ಒಳಗೊಂಡಿದ್ದು, ವಿವಿಧ ಇಲಾಖೆಗಳ ಅಧಿಕಾರಿಗಳು, ತಜ್ಞರು, ವಾಯುವಿಹಾರಿಗಳು ಮತ್ತು ಪರಿಸರವಾದಿ ಇದ್ದಾರೆ.

ಕಬ್ಬನ್‌ ಉದ್ಯಾನದ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿ ಹಾಗೂ ಪೂರಕ ಅಭಿವೃದ್ಧಿ ಕಾರ್ಯಚಟುವಟಿಕೆಗಳು ನಡೆಯುತ್ತಿವೆ. ಉದ್ಯಾನದ ಆವರಣದಲ್ಲಿ ನಡೆಯುವ ಚಟುವಟಿಕೆಗಳ ಸಾಧಕ–ಬಾಧಕಗಳನ್ನು ಪರಿಶೀಲಿಸಿ ತೆಗೆದುಕೊಳ್ಳುವ ನಿರ್ಣಯಗಳಿಗೆ ಸಂಬಂಧಪಟ್ಟ ಎಲ್ಲ ಇಲಾಖೆಗಳ ಸಂಸ್ಥೆಗಳು ಬದ್ಧರಾಗಬೇಕು ಎಂದು ತಿಳಿಸಿದೆ.

ಉದ್ಯಾನ ವೈವಿದ್ಯಮಯ ಪ್ರಾಣಿ–ಪಕ್ಷಿಗಳ ಜೀವಸಂಕುಲಗಳಿಗೆ ನೆಲೆಯಾಗಿದೆ. ಈ ಉದ್ಯಾನವನ್ನು ಸಂರಕ್ಷಿಸುವುದು ಸರ್ಕಾರ ಹಾಗೂ ಸಾರ್ವಜನಿಕರ ಜವಾಬ್ದಾರಿಯಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ. ಗುರುವಾರ ಸಮಿತಿಯ ಪ್ರಥಮ ಸಭೆ ನಡೆಯಿತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.