ADVERTISEMENT

ಕಬ್ಬನ್‌ ಉದ್ಯಾನ: ರಾಣಿ ವಿಕ್ಟೋರಿಯಾ ಪ್ರತಿಮೆ ಕಿರೀಟಕ್ಕೆ ಹಾನಿ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2024, 22:44 IST
Last Updated 18 ಡಿಸೆಂಬರ್ 2024, 22:44 IST
<div class="paragraphs"><p>ವಿಕ್ಟೋರಿಯಾ ಪ್ರತಿಮೆಯ ಕಿರೀಟ ಇಲ್ಲದಿರುವುದು</p></div>

ವಿಕ್ಟೋರಿಯಾ ಪ್ರತಿಮೆಯ ಕಿರೀಟ ಇಲ್ಲದಿರುವುದು

   

ಬೆಂಗಳೂರು: ‘ಕಬ್ಬನ್‌ ಉದ್ಯಾನದಲ್ಲಿ 1906ರಲ್ಲಿ ಸ್ಥಾಪಿಸಿದ ರಾಣಿ ವಿಕ್ಟೋರಿಯಾ ಪ್ರತಿಮೆಯ ಕಿರೀಟಕ್ಕೆ ಹಾನಿಯಾಗಿದೆ. ಈ ಕೃತ್ಯವೆಸಗಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು’ ಎಂದು ಕಬ್ಬನ್‌ ಉದ್ಯಾನ ನಡಿಗೆದಾರರ ಸಂಘದ ಅಧ್ಯಕ್ಷ ಉಮೇಶ್ ಆಗ್ರಹಿಸಿದ್ದಾರೆ.

‘ಉದ್ಯಾನದಲ್ಲಿನ ರಾಣಿ ವಿಕ್ಟೋರಿಯಾ ಅವರ ಪ್ರತಿಮೆಯು ವಿಶ್ವದ ಅಮೂಲ್ಯ ಸ್ಮಾರಕಗಳಲ್ಲಿ ಒಂದಾಗಿದೆ. ಇದು ನಮ್ಮ ಪರಂಪರೆಯ ಭಾಗ. ಕಿರೀಟವು ಆಕಸ್ಮಿಕವಾಗಿ ಬೀಳಲು ಸಾಧ್ಯವಿಲ್ಲ. ಈ ಐತಿಹಾಸಿಕ ಸ್ಮಾರಕವನ್ನು ನಾಶಪಡಿಸಲು ಯತ್ನಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕಿರೀಟ ಮೂರು ಭಾಗಗಳಾಗಿ ಒಡೆದಿದೆ. ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸಿ, ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ. ‘ಇದು ಕಿಡಿಗೇಡಿಗಳು ಮಾಡಿದ ಕೃತ್ಯವಲ್ಲ ಎಂಬುದು ತನಿಖೆ ವೇಳೆ ತಿಳಿದುಬಂದಿದೆ. ಆಕಸ್ಮಿಕವಾಗಿ ಕಿರೀಟ ಬಿದ್ದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.