ADVERTISEMENT

ಎನ್ಇಪಿಯಲ್ಲಿ ಸಾಂಸ್ಕೃತಿಕ ಚಟುವಟಿಕೆ ಕಡ್ಡಾಯ: ಡಾ.ಸಿ ಎನ್ ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 4 ಜನವರಿ 2023, 19:45 IST
Last Updated 4 ಜನವರಿ 2023, 19:45 IST
ನಗರದಲ್ಲಿ ಬುಧವಾರ ನಡೆದ ‘ಸಂಗೀತ ಸಂಭ್ರಮ’ ಕಾರ್ಯಕ್ರಮವನ್ನು ಸಚಿವ ಅಶ್ವತ್ಥ ನಾರಾಯಣ ಉದ್ಘಾಟಿಸಿದರು.
ನಗರದಲ್ಲಿ ಬುಧವಾರ ನಡೆದ ‘ಸಂಗೀತ ಸಂಭ್ರಮ’ ಕಾರ್ಯಕ್ರಮವನ್ನು ಸಚಿವ ಅಶ್ವತ್ಥ ನಾರಾಯಣ ಉದ್ಘಾಟಿಸಿದರು.   

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಜತೆಗೆ ದೈಹಿಕ ಶಿಕ್ಷಣ, ಡಿಜಿಟಲ್ ಮತ್ತು ಹಣಕಾಸು ಜಾಗೃತಿ ಕಲಿಕೆಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಗೂ ಕಡ್ಡಾಯಗೊಳಿಸಲಾಗಿದೆ. ಉಳಿದ ವಿಷಯಗಳ ಆಯ್ಕೆಯಲ್ಲಿ ಸಂಪೂರ್ಣ ಸ್ವಾತಂತ್ರ್ಯವನ್ನು ಕೊಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

ಮಲ್ಲೇಶ್ವರದಲ್ಲಿರುವ ಸೇವಾ ಸದನದಲ್ಲಿ ಬುಧವಾರ ನಡೆದ ‘ಸಂಗೀತ ಸಂಭ್ರಮ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ‘ಎನ್ಇಪಿಯಲ್ಲಿ ನಮ್ಮತನಕ್ಕೆ ಒತ್ತು ಕೊಡಲಾಗಿದೆ. ಶಿಕ್ಷಣ ವ್ಯವಸ್ಥೆಯಲ್ಲಿ ಪ್ರಧಾಮಂತ್ರಿ ನರೇಂದ್ರ ಮೋದಿ ಅವರು ತರುತ್ತಿರುವ ಸಕಾರಾತ್ಮಕ ಬದಲಾವಣೆಗಳನ್ನು ರಾಜ್ಯ ಸರ್ಕಾರವು ಅಷ್ಟೇ ಉತ್ಸಾಹ ಮತ್ತು ಬದ್ಧತೆಗಳಿಂದ ಅನುಷ್ಠಾನಗೊಳಿಸುತ್ತಿದೆ. ಈ ಮೂಲಕ, ಸಾರ್ವಜನಿಕರು ಹಲವು ದಶಕಗಳಿಂದ ಎದುರು ನೋಡುತ್ತಿದ್ದಂತಹ ಪರಿವರ್ತನೆ ಬರುತ್ತಿದೆ. ಶಿಕ್ಷಣ ವ್ಯವಸ್ಥೆಯಲ್ಲಿ ಸಮಾಜದ ನಿಜವಾದ ಅಗತ್ಯಗಳೇನು ಎನ್ನುವುದನ್ನು ಪರಿಗಣನೆಗೆ ತೆಗೆದುಕೊಂಡು ಮುಂದಡಿ ಇಡಬೇಕು. ಎನ್ಇಪಿ ಜಾರಿಯಲ್ಲಿ ರಾಜ್ಯವು ಇಡೀ ದೇಶಕ್ಕೆ ಪ್ರಥಮ ಸ್ಥಾನದಲ್ಲಿದೆ’ ಎಂದರು.

ಕಾರ್ಯಕ್ರಮದಲ್ಲಿ ಶ್ರೀ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್, ಹಿರಿಯ ಸಂಗೀತ ಕಲಾವಿದೆ ಪುಸ್ತಕಂ ರಮಾ ಮುಂತಾದವರು ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.