ಬೆಂಗಳೂರು: ಹೆಬ್ಬಾಳ ಕೆಂಪಾಪುರದಲ್ಲಿರುವ ಸಿಂಧಿ ಪದವಿಪೂರ್ವ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸ
ಲಾದ ಬೆಂಗಳೂರು ಉತ್ತರವಲಯದ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆಗೆ ಶುಕ್ರವಾರ ಚಾಲನೆ ನೀಡಲಾಯಿತು.
ಈ ವೇಳೆ ಮಾತನಾಡಿದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಬೆಂಗಳೂರು ಉತ್ತರ ಜಿಲ್ಲಾ ಉಪನಿರ್ದೇಶಕ ಅಶೋಕ್ ಕುಮಾರ್, ‘ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತಪ್ರತಿಭೆಯನ್ನು ಹೊರಹೊಮ್ಮಿಸಲು ಇದೊಂದು ವೇದಿಕೆ. ಇದರಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡುವುದರ ಜತೆಗೆ ಉತ್ತಮ ವ್ಯಕ್ತಿತ್ವ ನಿರ್ಮಾಣವಾಗಲು ಸಾಧ್ಯವಾಗುತ್ತದೆ’ ಎಂದರು.
‘ಇಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳು ಚಿಕ್ಕಬಳ್ಳಾಪುರದಲ್ಲಿ ನಡೆಯುವ ಬೆಂಗಳೂರು ವಿಭಾಗಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಲು ಅರ್ಹತೆ ಪಡೆಯುತ್ತಾರೆ. ನಂತರ ರಾಜ್ಯದ 4 ವಿಭಾಗಗಳಿಂದ ವಿಜೇತರಾದ ಸ್ಪರ್ಧೆಗಳಿಗಾಗಿ ಡಿ. 15ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಸ್ಪರ್ಧೆಗಳು ನಡೆಯಲಿವೆ’ ಎಂದರು.
ಪ್ರಾಂಶುಪಾಲರಾದ ಪ್ರೊ.ಪಲ್ಲವಿ, ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷೆ ಆರ್.ದೀಪಕ್ ನಾರಂಗ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.