ADVERTISEMENT

ಬೆಂಗಳೂರು | ವಿದ್ಯುತ್‌ ಅವಘಡ: ಲಾರಿ ಚಾಲಕ ಸಾವು

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2025, 14:31 IST
Last Updated 14 ಏಪ್ರಿಲ್ 2025, 14:31 IST
<div class="paragraphs"><p>ಸಾವು&nbsp; (ಪ್ರಾತಿನಿಧಿಕ ಚಿತ್ರ)</p></div>

ಸಾವು  (ಪ್ರಾತಿನಿಧಿಕ ಚಿತ್ರ)

   

ಬೆಂಗಳೂರು: ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಲಾರಿ ಚಾಲಕ ಚೋಟ್ಕಾ(45) ಅವರು ಮೃತಪಟ್ಟಿದ್ದಾರೆ. ಮೃತಪಟ್ಟ ಚಾಲಕ ಉತ್ತರ ಭಾರತದವರು ಎಂದು ಗೊತ್ತಾಗಿದೆ.

ಕೆಂಗೇರಿ ಉಪನಗರದ ಶಿರ್ಕೆ ವೃತ್ತದ ಬಳಿ ಅಪಾರ್ಟ್‌ಮೆಂಟ್‌ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಲಾರಿಯಿಂದ ಜಲ್ಲಿಯನ್ನು ಅನ್‌ಲೋಡ್‌ ಮಾಡಲಾಗುತ್ತಿತ್ತು. ಲಾರಿಯನ್ನು ಚಾಲಕ ಹಿಂದಕ್ಕೆ ತೆಗೆದುಕೊಳ್ಳುವ ಸಂದರ್ಭದಲ್ಲಿ ಲಾರಿ ವಿದ್ಯುತ್‌ ತಂತಿಗೆ ತಗುಲಿತ್ತು. ಆಗ ವಿದ್ಯುತ್‌ ಪ್ರವಹಿಸಿ ಸ್ಥಳದಲ್ಲೇ ಚಾಲಕ ಮೃತಪಟ್ಟಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ADVERTISEMENT

ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.