ADVERTISEMENT

ಅಪಘಾತ: ಸೈಬರ್‌ ಕೆಫೆ ಮಾಲೀಕ ಸಾವು

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2026, 14:43 IST
Last Updated 13 ಫೆಬ್ರುವರಿ 2026, 14:43 IST
<div class="paragraphs"><p>ಸಾವು (ಸಾಂದರ್ಭಿಕ ಚಿತ್ರ)</p></div>

ಸಾವು (ಸಾಂದರ್ಭಿಕ ಚಿತ್ರ)

   

ಗೆಟ್ಟಿ ಚಿತ್ರ

ಬೆಂಗಳೂರು: ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ವೇ ಸರ್ವೀಸ್ ರಸ್ತೆಯಲ್ಲಿ ಬೈಕ್ ನಿಯಂತ್ರಣ ತಪ್ಪಿದ್ದರಿಂದ ಕೆಳಕ್ಕೆ ಬಿದ್ದು ಸೈಬರ್‌ ಕೆಫೆ ಮಾಲೀಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ADVERTISEMENT

ಕೆಂಪೇಗೌಡ ಲೇಔಟ್‌ನ ನಿವಾಸಿ ಧನಂಜಯ್‌ (35) ಮೃತಪಟ್ಟವರು.

ಧನಂಜಯ್‌ ಅವರು ಕೆಂಗೇರಿ ಬಳಿ ಸೈಬರ್ ಕೆಫೆ ನಡೆಸುತ್ತಿದ್ದರು. ಗುರುವಾರ ರಾತ್ರಿ 10.30ರ ಸುಮಾರಿಗೆ ಮಳಿಗೆಗೆ ಬಾಗಿಲು ಹಾಕಿಕೊಂಡು ಮನೆಯತ್ತ ಬುಲೆಟ್‌ ಬೈಕ್‌ನಲ್ಲಿ ತೆರಳುತ್ತಿದ್ದರು. ಎಕ್ಸ್‌ಪ್ರೆಸ್‌ ವೇ ಸರ್ವೀಸ್ ರಸ್ತೆಯಲ್ಲಿ (ಬಸವ ಆಶ್ರಮದ ಬಳಿ) ಬೈಕ್ ನಿಯಂತ್ರಣ ತಪ್ಪಿದ್ದರಿಂದ ಕೆಳಕ್ಕೆ ಬಿದ್ದು ಅವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು.

ಕೆಂಗೇರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.