
ಪ್ರಜಾವಾಣಿ ವಾರ್ತೆ
ಬಂಧನ (ಸಾಂದರ್ಭಿಕ ಚಿತ್ರ)
ಬೆಂಗಳೂರು: ಪತ್ನಿಯ ಖಾಸಗಿ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡುತ್ತಿದ್ದ ಪತಿಯನ್ನು ಅಮೃತಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಗೋವಿಂದ ರಾಜ್( 27) ಬಂಧಿತ ಆರೋಪಿ.
‘ನಿತ್ಯ ಮದ್ಯ ಸೇವಿಸಿ ಮನೆಗೆ ಬಂದು ಪತ್ನಿಯ ಜತೆಗೆ ಗೋವಿಂದರಾಜು ಅವರು ಗಲಾಟೆ ಮಾಡುತ್ತಿದ್ದುದರಿಂದ ಬೇಸತ್ತಿದ್ದ ಪತ್ನಿ ವಿಚ್ಛೇದನ ಕೋರಿದ್ದರು. ಇದರಿಂದ ಸಿಟ್ಟಿಗೆದ್ದ ಗೋವಿಂದರಾಜು ಪತ್ನಿಯ ಖಾಸಗಿ ಫೋಟೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಿದ್ದರು’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
‘ಆರೋಪಿಗೆ ಆನ್‌ಲೈನಲ್ಲಿ ಬೆಟ್ಟಿಂಗ್ ಆಡುವ ಹಾಗೂ ವಿಪರೀತ ಮದ್ಯ ಸೇವನೆ ಅಭ್ಯಾಸವಿತ್ತು. ದಂಪತಿ ಮಧ್ಯೆ ನಿತ್ಯ ಜಗಳ ನಡೆಯುತ್ತಿತ್ತು. ಪತ್ನಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದರು’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.