ADVERTISEMENT

ಫೇಸ್‌ಬುಕ್‌ನಲ್ಲಿ ಫೋಟೊ ಅಪ್‌ಲೋಡ್ ಮಾಡಿ ಮಹಿಳೆಗೆ ಕಿರುಕುಳ: ಡಾರ್ಲಿಂಗ್ ಬಂಧನ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2022, 15:52 IST
Last Updated 1 ಮಾರ್ಚ್ 2022, 15:52 IST
ಡಾರ್ಲಿಂಗ್
ಡಾರ್ಲಿಂಗ್    

ಬೆಂಗಳೂರು: ಮಹಿಳೆಯ ಫೋಟೊವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿ ಕಿರುಕುಳ ನೀಡುತ್ತಿದ್ದ ಆರೋಪಿ ಚಂದ್ರಶೇಖರ್ ಅಲಿಯಾಸ್ ಡಾರ್ಲಿಂಗ್ (35) ಎಂಬಾತನನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ.

‘ಠಾಣೆ ವ್ಯಾಪ್ತಿಯ ನಿವಾಸಿಯಾದ ಮಹಿಳೆಯೊಬ್ಬರು ಇತ್ತೀಚೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಸ್ಥಳೀಯ ನಿವಾಸಿಯಾದ ಆರೋಪಿ, ಪರಿಚಯಸ್ಥ ಮಹಿಳೆಯ ಬಗ್ಗೆ ಫೇಸ್‌ಬುಕ್‌ನಲ್ಲಿ ಫೋಸ್ಟ್ ಅಪ್‌ಲೋಡ್ ಮಾಡಿದ್ದ. ಮಹಿಳೆಯ ಫೋಟೊ ಹಾಗೂ ಮೊಬೈಲ್ ನಂಬರ್ ಸಹ ದಾಖಲಿಸಿ ಕೆಟ್ಟದಾಗಿ ಬರೆದಿದ್ದ. ಅದಾದ ನಂತರ, ಮಹಿಳೆಗೆ ಹಲವರಿಂದ ಕರೆಗಳು ಬಂದಿದ್ದವು. ಅದರಿಂದ ನೊಂದ ಮಹಿಳೆ, ದೂರು ನೀಡಿದ್ದರು.’

ADVERTISEMENT

‘ಮಹಿಳೆ ಜೊತೆ ಸಲುಗೆ ಬೆಳೆಸಲು ಆರೋಪಿ ಯತ್ನಿಸಿದ್ದ. ಅದಕ್ಕೆ ಮಹಿಳೆ ಒಪ್ಪಿರಲಿಲ್ಲ. ಅದೇ ಸಿಟ್ಟಿನಿಂದ ಆರೋಪಿ ಕೃತ್ಯ ಎಸಗಿದ್ದನೆಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.