ವಂಚನೆ
ಬೆಂಗಳೂರು: ರಿವ್ಯೂ ಹೆಸರಿನಲ್ಲಿ ಖಾಸಗಿ ಕಂಪನಿಯ ಉದ್ಯೋಗಿಯೊಬ್ಬರಿಗೆ ಸೈಬರ್ ವಂಚಕರು ₹12.81 ಲಕ್ಷ ವಂಚನೆ ಮಾಡಿದ್ದಾರೆ.
ಸಂತ್ರಸ್ತೆ ರಮ್ಯಾ ಅವರ ದೂರು ಆಧರಿಸಿ ಕೇಂದ್ರ ವಿಭಾಗದ ಸೈಬರ್ ಅಪರಾಧ ಠಾಣೆ ಪೊಲೀಸರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಕೆಲ ದಿನಗಳ ಹಿಂದೆ ಪ್ರಿಯಾ ಎಂಬ ಮಹಿಳೆ ವಾಟ್ಸ್‌ಆ್ಯಪ್‌ನಲ್ಲಿ ರಮ್ಯಾ ಅವರಿಗೆ ಸಂದೇಶ ಕಳುಹಿಸಿ, ಮನೆಯಲ್ಲಿಯೇ ಕುಳಿತು ರೆಸ್ಟೋರೆಂಟ್‌ಗಳಿಗೆ ರಿವ್ಯೂ ನೀಡಿ ಹಣ ಗಳಿಸಬಹುದೆಂದು ತಿಳಿಸಿದ್ದರು. ಇದನ್ನು ನಂಬಿದ ಅವರು, ಪ್ರಿಯಾ ಸೂಚಿಸಿದ್ದ ಟೆಲಿಗ್ರಾಂ ಗ್ರೂಪ್‌ಗೆ ಸೇರಿದ್ದರು.
ನಂತರ ಟಾಸ್ಕ್‌ಗಳ ಹೆಸರಲ್ಲಿ ರಮ್ಯಾ ಅವರಿಂದಲೇ ಹಣ ಹೂಡಿಕೆ ಮಾಡಿಸಲು ಯತ್ನಿಸಿದ್ದಾರೆ. ಹೂಡಿಕೆ ಮಾಡಿದರೆ ಅತ್ಯಧಿಕ ಲಾಭ ಸಿಗುವುದೆಂದು ನಂಬಿಸಿದ್ದಾರೆ. ಅದನ್ನು ನಂಬಿದ ರಮ್ಯಾ, ಆರೋಪಿ ನೀಡಿದ್ದ ವಿವಿಧ ಬ್ಯಾಂಕ್ ಖಾತೆಗಳಿಗೆ ₹12.81 ಲಕ್ಷ ವರ್ಗಾಯಿಸಿದ್ದಾರೆ. ಹಣ ವಾಪಸ್ ಪಡೆಯಲು ಮುಂದಾದಾಗ ಮತ್ತೆ ₹32 ಲಕ್ಷ ವರ್ಗಾಯಿಸುವಂತೆ ಬೇಡಿಕೆ ಇಟ್ಟಿದ್ದಾರೆ. ಇದರಿಂದ ಅನುಮಾನಗೊಂಡ ಅವರು ದೂರು ನೀಡಿದ್ದಾರೆ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.