ADVERTISEMENT

ಸೈಬರ್‌ ಅಪರಾಧ: ಹೂಡಿಕೆ ಹೆಸರಿನಲ್ಲಿ ಶೇ 70.51 ವಂಚನೆ

ಸೈಬರ್‌ ಅಪರಾಧ ಅಧ್ಯಯನ ವರದಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 28 ಜೂನ್ 2025, 16:25 IST
Last Updated 28 ಜೂನ್ 2025, 16:25 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ನಗರದಲ್ಲಿ ಹೂಡಿಕೆಯ ಹೆಸರಿನಲ್ಲಿ ಶೇ 70.51ರಷ್ಟು ವಂಚನೆ ನಡೆದಿರುವುದು ಸಂಶೋಧನಾ ವರದಿಯಿಂದ ಬಹಿರಂಗವಾಗಿದೆ.

ರಾಜ್ಯ ಪೊಲೀಸ್‌ ಮಹಾನಿರ್ದೇಶರ ಕಚೇರಿಯಲ್ಲಿ ಎರಡು ದಿನ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮೇಳನದಲ್ಲಿ ಸೈಬರ್‌ ಅಪರಾಧ ಅಧ್ಯಯನ ವರದಿ ಬಿಡುಗಡೆ ಮಾಡಲಾಗಿದ್ದು ವಿವಿಧ ಕ್ಷೇತ್ರಗಳಲ್ಲಿ ಎಷ್ಟು ಪ್ರಮಾಣದಲ್ಲಿ ಕಳೆದ ವರ್ಷ ವಂಚನೆ ನಡೆಸಲಾಗಿದೆ ಎಂಬುದು ಗೊತ್ತಾಗಿದೆ.

ADVERTISEMENT

ಸೈಬರ್‌ ಅಪರಾಧ ಪ್ರಕರಣಗಳಲ್ಲಿ ಅಕ್ರಮ ಹಣದ ವರ್ಗಾವಣೆಗೆ ವ್ಯಾಪಕವಾಗಿ ನಕಲಿ ಬ್ಯಾಂಕ್‌ ಖಾತೆಗಳ ಬಳಕೆಯ ಬಗ್ಗೆ ಅಧ್ಯಯನ ನಡೆಸಿ ವಂಚನೆ ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳ ಕುರಿತು ಶಿಫಾರಸು ಮಾಡುವಂತೆ ಸಿಐಡಿ ಸೈಬರ್ ಅಪರಾಧ ತನಿಖಾ ತರಬೇತಿ ಮತ್ತು ಸಂಶೋಧನಾ ಕೇಂದ್ರದಿಂದ ವಿಶೇಷ ತಂಡ ರಚಿಸಲಾಗಿತ್ತು. ತಂಡದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ತನಿಖಾಧಿಕಾರಿಗಳು, ಡೇಟಾ ಸೆಕ್ಯೂರಿಟಿ ಕೌನ್ಸಿಲ್‌ ಆಫ್‌ ಇಂಡಿಯಾದ ತಜ್ಞರು ಹಾಗೂ ಬ್ಯಾಕಿಂಗ್‌ ವಲಯದ ಪ್ರತಿನಿಧಿಗಳು ಇದ್ದರು.

ಸೈಬರ್ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳನ್ನು ವಿಶ್ಲೇಷಿಸಿ ಸಂಶೋಧನಾ ವರದಿ ಬಿಡುಗಡೆ ಮಾಡಲಾಗಿದೆ. ನಕಲಿ ಬ್ಯಾಂಕ್‌ ಖಾತೆಗಳನ್ನೇ ವಂಚಕರು ಬಳಸಿರುವುದು ವಿಶ್ಲೇಷಣೆಯಿಂದ ಗೊತ್ತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.