ಬೆಂಗಳೂರು: ಪ್ರಾಸ್ಟೇಟ್ (ಮೂತ್ರನಾಳ) ಕ್ಯಾನ್ಸರ್ ಜಾಗೃತಿ ಕುರಿತು ಎಚ್‌ಸಿಜಿ ಕ್ಯಾನ್ಸರ್ ಸೆಂಟರ್ ವತಿಯಿಂದ ‘ಸೈಕ್ಲೋಥಾನ್@ನಮ್ಮ ಬೆಂಗಳೂರು’ ಆಯೋಜಿಸಲಾಗಿತ್ತು.
ಪುರುಷರ ಆರೋಗ್ಯದ ಕುರಿತು ಕಾಳಜಿ ಹಾಗೂ ಪ್ರಾಸ್ಟೇಟ್ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ನಡೆದ 6.5 ಕಿಲೋ ಮೀಟರ್ ಸೈಕಲ್ ಜಾಥಾದಲ್ಲಿ 400ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.
ಜಾಥಾವು ರೆಸಿಡೆನ್ಸಿ ರಸ್ತೆ, ಕ್ವೀನ್ಸ್ ರಸ್ತೆ, ವಿಧಾನ ಸೌಧ ಮಾರ್ಗವಾಗಿ ಸಾಗಿ ಆಸ್ಪತ್ರೆಯಲ್ಲಿ ಅಂತ್ಯಗೊಂಡಿತು.
ಹೆಲ್ತ್‌ಕೇರ್ ಗ್ಲೋಬಲ್ ಎಂಟರ್‌ಪ್ರೈಸೆಸ್ ಲಿಮಿಟೆಡ್‌ನ ಮುಖ್ಯ ನಿರ್ವಹಣಾಧಿಕಾರಿ ಮನೀಶಾ ಕುಮಾರ್ ಅವರು ಸೈಕಲ್ ಜಾಥಾಗೆ ಚಾಲನೆ ನೀಡಿದರು. ಎಚ್‌ಸಿಜಿ ಕ್ಯಾನ್ಸರ್ ಕೇಂದ್ರದ ಡಾ.ರಘುನಾಥ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.