ADVERTISEMENT

ಹೋಟೆಲ್‌ನಲ್ಲಿ ಸಿಲಿಂಡರ್ ಸ್ಫೋಟ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2020, 19:28 IST
Last Updated 11 ಫೆಬ್ರುವರಿ 2020, 19:28 IST
ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದ ‘ಬಾಂಬೆ ಕುಲ್ಫಿ’ ಹೋಟೆಲ್
ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದ ‘ಬಾಂಬೆ ಕುಲ್ಫಿ’ ಹೋಟೆಲ್   

ಬೆಂಗಳೂರು: ಕೋರಮಂಗಲದ ವಿಪ್ರೊ ವೃತ್ತ ಬಳಿಯ ‘ಬಾಂಬೆ ಕುಲ್ಫಿ’ ಹೋಟೆಲ್‌ನಲ್ಲಿ ಮಂಗಳವಾರ ರಾತ್ರಿ ಅಡುಗೆ ಅನಿಲ ಸಿಲಿಂಡರ್‌ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದ್ದು, ಮೂವರು ಗಾಯಗೊಂಡಿದ್ದಾರೆ.

ರಾತ್ರಿ 9ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಮೂರು ಅಗ್ನಿಶಾಮಕ ದಳದ ವಾಹನಗಳ ಮೂಲಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದರು. ತಡರಾತ್ರಿಯವರೆಗೂ ಕಾರ್ಯಾಚರಣೆ ನಡೆಯಿತು.

ಆಗ್ನೇಯ ವಿಭಾಗದ ಡಿಸಿಪಿ ಇಶಾ ಪಂತ್ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ‘ಹೋಟೆಲ್‌ನ ಅಡುಗೆ ಮನೆಯಲ್ಲಿದ್ದ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡು ಇಡೀ ಕಟ್ಟಡಕ್ಕೆ ಆವರಿಸಿತ್ತು. ಅಡುಗೆ ಕೊಠಡಿಯಲ್ಲಿದ್ದ ಮೂವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ಹೇಳಿದರು. ‘ಹೋಟೆಲ್‌ ಅಕ್ಕ–ಪಕ್ಕದಲ್ಲಿದ್ದ ಕಟ್ಟಡಗಳಿಗೂ ಅಲ್ಪ ಪ್ರಮಾಣದಲ್ಲಿ ಬೆಂಕಿ ತಗುಲಿದೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.