ADVERTISEMENT

ಬೆಂಗಳೂರು | ಸಿಲಿಂಡರ್ ಸ್ಫೋಟ: ಮಾಜಿ ಸೈನಿಕನಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2025, 14:23 IST
Last Updated 19 ಅಕ್ಟೋಬರ್ 2025, 14:23 IST
<div class="paragraphs"><p>ಸ್ಫೋಟ</p></div>

ಸ್ಫೋಟ

   

ಬೆಂಗಳೂರು: ಅಂದ್ರಹಳ್ಳಿ ಸಮೀಪದ ಬ್ಯಾಡರಹಳ್ಳಿಯ ವಿದ್ಯಾಮಾನ್ಯ ನಗರದ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮಾಜಿ ಸೈನಿಕರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಡಿಕೇರಿ ಜಿಲ್ಲೆಯ ಜನಾರ್ದನ್ (60) ಗಾಯಾಳು. ಅವರು ವಾಸವಿದ್ದ ಬಾಡಿಗೆ ಮನೆಯಲ್ಲಿ ಅನಿಲ ಸೋರಿಕೆಯಾಗಿತ್ತು. ಶುಕ್ರವಾರ ರಾತ್ರಿ 9 ಗಂಟೆಯಲ್ಲಿ ಅಡುಗೆ ಮಾಡಲು ಸ್ಟೌ ಹಚ್ಚುತ್ತಿದ್ದಂತೆ ಸಿಲಿಂಡರ್ ಸ್ಪೋಟಗೊಂಡಿತ್ತು. ಇದರ ತೀವ್ರತೆಗೆ ಮನೆಯ ಗೋಡೆಗಳು ಬಿರುಕು ಬಿಟ್ಟಿವೆ. ಗಾಯಗೊಂಡಿರುವ  ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.