ADVERTISEMENT

ಡಿ.ಜೆ.ಹಳ್ಳಿ ಗಲಭೆಗೆ ಕಾಂಗ್ರೆಸ್ ಒಳ ಜಗಳವೇ ಕಾರಣ: ಎಸ್‌ಡಿಪಿಐ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2020, 21:06 IST
Last Updated 25 ಆಗಸ್ಟ್ 2020, 21:06 IST
ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆಯಲ್ಲಿ ಸುಟ್ಟು ಕರಕಲಾದ ವಾಹನ
ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆಯಲ್ಲಿ ಸುಟ್ಟು ಕರಕಲಾದ ವಾಹನ   

ಬೆಂಗಳೂರು: ’ಡಿ.ಜೆ. ಹಳ್ಳಿ ಹಾಗೂ ಕೆ.ಜಿ. ಹಳ್ಳಿಯಲ್ಲಿ ನಡೆದಿರುವ ಗಲಭೆಗೆ ಕಾಂಗ್ರೆಸ್ ಒಳ ಜಗಳವೇ ಕಾರಣ’ ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ರಾಜ್ಯ ಘಟಕದ ಅಧ್ಯಕ್ಷ ಇಲಿಯಾಸ್ ಮುಹಮ್ಮದ್ ತುಂಬೆ ಆರೋಪಿಸಿದರು.

ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾರ್ಪೋರೇಟರ್ ಆರ್‌. ಸಂಪತ್ ರಾಜ್, ಅವರ ಆಪ್ತ ಸಹಾಯಕ ಅರುಣ್ ಕುಮಾರ್ ಮತ್ತು ಶಾಸಕ ಅಖಂಡ ಶ್ರೀನಿವಾಸಮೂರ್ತಿನಡುವಿನ ರಾಜಕೀಯ ಜಗಳವೇ ಗಲಭೆ ಸೃಷ್ಟಿಗೆ ಕಾರಣ’ ಎಂದು ದೂರಿದರು.

‘ಗಲಭೆಯಲ್ಲಿ ಎಸ್‌ಡಿಪಿಐ ಪಾತ್ರವಿರುವುದಾಗಿ ಆರೋಪಿಸಲಾಗುತ್ತಿದೆ. ನವೀನ್‌ಗೆ ವ್ಯಂಗ್ಯಚಿತ್ರ ಕೊಟ್ಟವರು ಯಾರು? ಅದರ ಬಗ್ಗೆ ಯಾಕೆ ತನಿಖೆಯಾಗುತ್ತಿಲ್ಲ. ನವೀನ್‌ನನ್ನು ಎಲ್ಲಿಂದ ಬಂಧಿಸಲಾಯಿತೆಂದು ಪೊಲೀಸರು ಏಕೆ ಹೇಳುತ್ತಿಲ್ಲ’ ಎಂದೂ ಅವರು ಪ್ರಶ್ನಿಸಿದರು.

ADVERTISEMENT

‘13 ಕೊಲೆಗಳ ಆರೋಪ ಹೊರಿಸಿ ಎಸ್‌ಡಿಪಿಐ ನಿಷೇಧಿಸಲು ಹೊರಟಿದ್ದಾರೆ. ನಿಷೇಧ ಏಕೆ ಮಾಡಬೇಕು’ ಎಂದು ಪ್ರಶ್ನಿಸಿದ ಅವರು, ‘ಕಾಂಗ್ರೆಸ್ ಮತ್ತು ಸಂಘ ಪರಿವಾರದವರು ಮಾಡಿರುವ ಕೊಲೆಗಳ ಪಟ್ಟಿ ನಮ್ಮಲ್ಲಿದೆ. ಡಿ.ಜೆ ಹಳ್ಳಿ ಮತ್ತು ಕೆ.ಜಿ. ಹಳ್ಳಿಯಲ್ಲಿ ದೊಡ್ಡ ಗಾಂಜಾ ದಂಧೆ ಇದೆ. ಇದರ ಬಗ್ಗೆ ನಮಗೆ ಸಂಪೂರ್ಣ ಮಾಹಿತಿಯಿದೆ. ಇದರ ಹಿಂದೆ ಯಾರಿದ್ದಾರೆಂದು ಬಹಿರಂಗಪಡಿಸಬೇಕು‘ ಎಂದು ಒತ್ತಾಯಿಸಿದರು

‘ಗಲಭೆ ವೇಳೆ ಪೊಲೀಸರು ಗುಂಡು ಹಾರಿಸಿದ್ದರು. ಈ ಪ್ರಕರಣವನ್ನು ಹೈಕೋರ್ಟ್ ನ್ಯಾಯಮೂರ್ತಿಗಳ ಮೂಲಕ ತನಿಖೆ ನಡೆಸಬೇಕು’ ಎಂದೂ ಅವರು ಆಗ್ರಹಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.