ADVERTISEMENT

ಡಿ.ಜೆ. ಹಳ್ಳಿ ಗಲಭೆ ಪ್ರಕರಣ: ಸಂಪತ್ ರಾಜ್ ಸ್ನೇಹಿತ ಬಂಧನ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2020, 8:31 IST
Last Updated 16 ನವೆಂಬರ್ 2020, 8:31 IST
ರಿಯಾಜುದ್ದೀನ್
ರಿಯಾಜುದ್ದೀನ್   

ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ‌ ಮಾಡಿ ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳಿಗೆ ಕೆಲ ದಿನ ಆಶ್ರಯ ನೀಡಿದ್ದ ಆರೋಪದಡಿ ರಿಯಾಜುದ್ದೀನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ರಿಯಾಜುದ್ದೀನ್, ಪ್ರಕರಣದ ಆರೋಪಿಯಾದ ಮಾಜಿ ಮೇಯರ್ ಆರ್. ಸಂಪತ್‌ರಾಜ್ ಹಾಗೂ ಮಾಜಿ ಕಾರ್ಪೋರೇಟರ್ ಜಾಕೀರ್ ಸ್ನೇಹಿತ. ಇದೀಗ ಸಂಪತ್ ರಾಜ್ ಹಾಗೂ ಜಾಕೀರ್ ಇಬ್ಬರೂ ತಲೆಮರೆಸಿಕೊಂಡು ಓಡಾಡುತ್ತಿದ್ದಾರೆ.

'ಆರೋಪಿಗಳು ಪರಾರಿಯಾಗಲು ರಿಯಾಜುದ್ದೀನ್ ಸಹಾಯ ಮಾಡಿದ್ದ. ತನ್ನ ಕಾರಿನಲ್ಲಿ ಆರೋಪಿಗಳನ್ನು ನಾಗರಹೊಳೆ ಬಳಿ ಇರುವ ಫಾರ್ಮ್ ಹೌಸ್‌ಗೆ ಕರೆದೊಯ್ದಿದ್ದ. ಅಲ್ಲಿಯೇ ಆರೋಪಿಗಳು ಕೆಲ ದಿನ ಉಳಿದುಕೊಂಡಿದ್ದರು. ನಂತರ, ಅಲ್ಲಿಂದ ಬೇರೆಡೆ ಆರೋಪಿಗಳು ಹೊರಟು ಹೋಗಿದ್ದಾರೆ' ಎಂದು ಸಿಸಿಬಿ ಜಂಟಿ‌ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.

ADVERTISEMENT

'ರಿಯಾಜುದ್ದೀನ್‌ನನ್ನು ಬಂಧಿಸಿ ಹೇಳಿಕೆ ಪಡೆಯಲಾಗಿದೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಸದ್ಯ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ. ಸಂಪತ್ ರಾಜ್ ಬಂಧನಕ್ಕೂ ಬಲೆ ಬೀಸಲಾಗಿದೆ' ಎಂದೂ ಹೇಳಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.