ದಾಬಸ್ ಪೇಟೆ ಬಸ್ ನಿಲ್ದಾಣದ ಅಭಿವೃದ್ಧಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವ ರಾಮಲಿಂಗಾರೆಡ್ಡಿ.
ದಾಬಸ್ ಪೇಟೆ: ವೇಗವಾಗಿ ಬೆಳೆಯುತ್ತಿರುವ ಈ ಭಾಗದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಸೋಮವಾರ ಪಟ್ಟಣದ ಸರ್ಕಾರಿ ಬಸ್ ನಿಲ್ದಾಣ ವೀಕ್ಷಿಸಿ ಅವರು ಮಾತನಾಡಿದರು.
ಏಷ್ಯಾದಲ್ಲಿಯೇ ದೊಡ್ಡ ಕೈಗಾರಿಕಾ ಪ್ರದೇಶ ಹೊಂದಿರುವ ಸೋಂಪುರ ಕೈಗಾರಿಕಾ ಪ್ರದೇಶದಲ್ಲಿರುವ ಬಸ್ ನಿಲ್ದಾಣ ಚಿಕ್ಕದಾಗಿದ್ದು, ಅವೈಜ್ಞಾನಿಕವಾಗಿ ನಿರ್ಮಾಣ ಆಗಿದೆ. ಇರುವ ಜಾಗದಲ್ಲಿಯೇ ವ್ಯವಸ್ಥಿತವಾದ ಹೈಟೆಕ್ ಬಸ್ ನಿಲ್ದಾಣ ಮಾಡಲಾಗುವುದು. ಹಿಂದೆ ಬಸ್ ನಿಲ್ದಾಣ ಅಭಿವೃದ್ಧಿಗೆ ₹75 ಲಕ್ಷ ಬಿಡುಗಡೆಯಾಗಿತ್ತು. ಇದೀಗ ಶಾಸಕ ಶ್ರೀನಿವಾಸ್ ಅವರು ಶಾಸಕರ ಅನುದಾನದಲ್ಲಿ ₹2.5ಲಕ್ಷ ನೀಡಿದ್ದಾರೆ. ಅಗತ್ಯವಿದ್ದರೆ ಇಲಾಖೆಯಿಂದಲೂ ಹಣ ನೀಡಲಾಗುವುದು ಎಂದರು.
ಶಾಸಕ ಎನ್. ಶ್ರೀನಿವಾಸ್ ಹಾಗೂ ಕಾಂಗ್ರೆಸ್ ನಾಯಕರು ಮತ್ತು ಸಾರಿಗೆ ಸಾರಿಗೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ದಾಬಸ್ ಪೇಟೆ ಬಸ್ ನಿಲ್ದಾಣದ ಅಭಿವೃದ್ಧಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವ ರಾಮಲಿಂಗಾರೆಡ್ಡಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.