
ದಾಬಸ್‌ಪೇಟೆ: ನೆಲಮಂಗಲ ತಾಲ್ಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಒ ಗೀತಾಮಣಿ ಅವರ ವಿರುದ್ಧ ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಗೋವೇನಹಳ್ಳಿ ಗ್ರಾಮದ ರಾಮಚಂದ್ರಯ್ಯ ಅವರ ಸಾವಿಗೆ ಪಿಡಿಒ ಅವರೇ ಕಾರಣ’ ಎಂದು ಮೃತ ವ್ಯಕ್ತಿಯ ಸಂಬಂಧಿ ದೂರು ನೀಡಿದ್ದಾರೆ. ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ.
‘ರಾಮಚಂದ್ರಯ್ಯ ಪಂಚಾಯಿತಿಯ ಗ್ರಂಥಾಲಯದಲ್ಲಿ ಮೇಲ್ವಿಚಾರಕರಾಗಿ (ಅರೆಕಾಲಿಕ) ಕೆಲಸ ಮಾಡುತ್ತಿದ್ದರು. ಮೂರು ತಿಂಗಳಿಂದ ಗೀತಾಮಣಿ ಅವರು ರಾಮಚಂದ್ರಯ್ಯ ಅವರಿಗೆ ಸಂಬಳ ನೀಡಿರಲಿಲ್ಲ. ಹಾಜರಾತಿ ತೋರಿಸಲು ಬಯೋಮೆಟ್ರಿಕ್ ನೀಡದೇ ತೊಂದರೆ ನೀಡಿದ್ದರು. ಕೆಲಸಕ್ಕೆ ಬೇಡವೆಂದೂ ಹೇಳಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪಿಡಿಒ ವರ್ತನೆ ಖಂಡಿಸಿ ಹಾಗೂ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬುಧವಾರ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸುವುದಾಗಿ ಗ್ರಂಥಾಲಯ ಮೇಲ್ವಿಚಾರಕರ ಸಂಘದ ಜಿಲ್ಲಾ ಅಧ್ಯಕ್ಷೆ ಶಾರದಮ್ಮ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.